ಗುರುವಾರ , ಡಿಸೆಂಬರ್ 1, 2022
20 °C

ಅಕ್ಷರಾಭ್ಯಾಸ, ವೀಣಾಪಾಣಿ ಪೂಜೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಳೆಹೊನ್ನೂರು: ಪಟ್ಟಣದ ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿ ಆಯೋಜಿಸಿರುವ 13ನೇ ವರ್ಷದ ದುರ್ಗಾ ಪೂಜಾ ಮಹೋತ್ಸವದ ಅಂಗವಾಗಿ ಭಾನುವಾರ ಬೆಳಿಗ್ಗೆ ದೇವಿ ಸನ್ನಿಧಿಯಲ್ಲಿ 10ರಿಂದ ಮಧ್ಯಾಹ್ನ 1ರವರೆಗೆ ವೀಣಾಪಾಣಿ ಮೋಹಿನಿ ರೂಪಿಣಿ ಪೂಜಾ ಪಾರಾಯಣ ಮತ್ತು ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಲಿದೆ.

ಸಂಜೆ 6ರಿಂದ 7.45ರವರೆಗೆ ಭಕ್ತಾದಿಗಳಿಂದ ವಿವಿಧ ಪೂಜಾ ಸೇವೆ, ಮಹಾಮಂಗಳಾರತಿ ನಡೆಯಲಿದೆ. ರಾತ್ರಿ 8ರಿಂದ ಮಂಗಳೂರಿನ ಸನಾತನ ನಾಟ್ಯಾಲಯದ ಕಲಾವಿದರಿಂದ ಪುಣ್ಯಭೂಮಿ ಭಾರತ ಧರ್ಮ ಜಾಗೃತಿ ಕಾರ್ಯಕ್ರಮ ನಡೆಯಲಿದೆ.

ಶರನ್ನವರಾತ್ರಿ ಮಹೋತ್ಸವದಲ್ಲಿ ಶುಕ್ರವಾರ ಭಾಗವತ ಪಟ್ಲ ಸತೀಶ್‍ ಶೆಟ್ಟಿ ನೇತೃತ್ವದ ತೆಂಕುತಿಟ್ಟಿನ ಕಲಾವಿದರಿಂದ ಯಕ್ಷಗಾನ ಪ್ರಸಂಗ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು