ಬಾಳೆಹೊನ್ನೂರು: ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಿರುವ ರಾಜಗೋಪುರ ಮತ್ತು ಮಹಾದ್ವಾರ ಲೋಕಾರ್ಪಣೆ ಶನಿವಾರ ಮತ್ತು ಭಾನುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ರಾಜಗೋಪುರ ಉದ್ಘಾಟನೆ ಅಂಗವಾಗಿ ಶನಿವಾರ ಗಣಪತಿ ಪೂಜೆ, ಪುಣ್ಯಾಹವಾಚನ, ದೇವನಾಂದಿ, ಮಾತೃಕ ಪೂಜೆ, ರಾಕ್ಷೋಘ್ನ ಶಾಂತಿ, ನವಗ್ರಹ ಶಾಂತಿ, ವಾಸ್ತು ಶಾಂತಿ, ಅಧಿವಾಸ, ಪವಮಾನ, ವಾಯುಸ್ತುತಿ, ದಿಕ್ಪಾಲ ಬಲಿ ಪ್ರಧಾನ, ಕಲಶ ಪ್ರತಿಷ್ಠೆ ಹಾಗೂ ಪಾರಾಯಣ ನಡೆಯಿತು.

ಭಾನುವಾರ ಬೆಳಿಗ್ಗೆ ಪ್ರತಿಷ್ಠಾಂಗ ಹೋಮ, ರಾಮನಾಮ ತಾರಕ ಹೋಮ, ಪವಮಾನ, ವಾಯುಸ್ತುತಿ, ಕಲಶಾಭಿಷೇಕ, ಮಹಾಪೂಜೆ ನಡೆಯಿತು. ಸಂಜೆ ಶೃಂಗೇರಿಯ ಹೆಬ್ಬಾಗಿಲು ಲಕ್ಷ್ಮೀ ವೆಂಕಟರಮಣ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.

ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವ ಡಿ.ಎನ್.ಜೀವರಾಜ್ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-126-799208638

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.