ಬಾಳೆಹೊನ್ನೂರು: ಮನೆಯಲ್ಲಿ ಅನಾರೋಗ್ಯ ಪೀಡಿತರರಿಗೆ ಔಷಧ ಹಾಗೂ ಸರ್ಕಾರದ ಸವಲತ್ತು ನೀಡುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಘಟನೆಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೇರೂರು ಗ್ರಾಮದ ವೀರಗಲ್ಲುಮಕ್ಕಿಯಲ್ಲಿ ಪಾರ್ಶ್ಚವಾಯುವಿನಿಂದ ಬಳಲುತ್ತಿದ್ದ ನಾಗಯ್ಯ ಎಂಬುವವರ ಮನೆಗೆ ಬಂದ ಅಪರಿಚಿತನೊಬ್ಬ ಶೀಘ್ರ ಗುಣಮುಖರಾಗಲು ಆಯುರ್ವೇದ ಔಷಧ ನೀಡುವುದಾಗಿ ಹಾಗೂ ಸರ್ಕಾರದಿಂದ ಆನಾರೋಗ್ಯ ಪೀಡಿತರಿಗೆ ವೀಲ್ ಚೇರ್, ಉಚಿತ ಔಷಧ ಕೊಡಿಸುವುದಾಗಿ ನಂಬಿಸಿ ₹13 ಸಾವಿರ ಹಣ ಪಡೆದು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ನಾರಾಯಣ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ಹಿರೇಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇದೇ ರೀತಿ ನಂಬಿಸಿ ₹25 ಸಾವಿರ ಪಡೆದು ವಂಚಿಸಿದ್ದಾನೆ ಎಂದು ದೂರು ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-126-1116194594

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.