ಬಾಳೆಹೊನ್ನೂರು: ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಡಬಗೆರೆಯ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿದ್ದ ರತ್ನಾಕರ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಅತ್ತೆ ಜ್ಯೋತಿ(50), ಮಗಳು ಮೌಲ್ಯ(6) ಮತ್ತೆ ನಾದಿನಿ ಸಿಂಧು(24) ಗುಂಡು ತಗುಲಿ ಮೃತಪಟ್ಟಿದ್ದಾರೆ. ನಾದಿನಿಯ ಗಂಡನ ಕಾಲಿಗೆ ಗುಂಡು ತಗಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರತ್ನಾಕರ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾತ್ರಿ 10 ಗಂಟೆ ಸುಮಾರಿನಲ್ಲಿ ಈ ಕೃತ್ಯ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಗುಂಡು ಹಾರಿಸುವ ಮುನ್ನ ರತ್ನಾಕರ ವಿಡಿಯೊ ಒಂದನ್ನು ಹರಿಬಿಟ್ಟಿದ್ದು, ‘ಕುಟುಂಬದವರು ನನಗೆ ಮೋಸ ಮಾಡಿದ್ದಾರೆ. ಎರಡು ವರ್ಷದಿಂದ ಪತ್ನಿ ನನ್ನನ್ನು ಬಿಟ್ಟು ಹೋಗಿದ್ದಾಳೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.