ಕುದುರೆಮುಖ ಉದ್ಯಾನ ವ್ಯಾಪ್ತಿಯ ಜಲಪಾತಗಳು ಮತ್ತು ಗಿರಿಯಲ್ಲಿ ಪ್ರವಾಸಿಗರು ಮುಂಜಾಗ್ರತೆ ವಹಿಸದೆ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇದೆ. ಆದ್ದರಿಂದ ಸದ್ಯಕ್ಕೆ ಪ್ರವಾಸ ಚಟುವಟಿಕೆ ನಿರ್ಬಂಧಿಸುವಂತೆ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.