ಕಡರನಾಯ್ಕನಹಳ್ಳಿ: ಭದ್ರಾ ಅಚ್ಚುಕಟ್ಟು ಪ್ರದೇಶದ ಕೊನೆಯ ಭಾಗದ ಭಾನುವಳ್ಳಿ, ನಂದಿತಾವರೆ, ಕಮಲಾಪುರ, ಕಡರನಾಯ್ಕನಹಳ್ಳಿ ಹಾಗೂ ಹೊಳೆಸಿರಿಗೆರೆ ಗ್ರಾಮಗಳ ವ್ಯಾಪ್ತಿಯ ಭತ್ತದ ಗದ್ದೆಗಳಿಗೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಮತ್ತು ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ಅಧಿಕಾರಿಗಳ ಜೊತೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರೈತರೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿ, ನೀರಿನ ಹಂಚಿಕೆ ಹಾಗೂ ಕಾಲುವೆ ನಿರ್ವಹಣೆಯ ಕುರಿತು ಅಹವಾಲುಗಳನ್ನು ಆಲಿಸಿದರು.

ಕಾಲುವೆಯ ತುದಿವರೆಗೂ ನೀರು ಸರಾಗವಾಗಿ ಹರಿಯುತ್ತಿದೆಯೇ ಅಥವಾ ಇಲ್ಲವೇ ಎಂಬುದನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು. ಈ ಭಾಗದ ರೈತರು ಎದುರಿಸುತ್ತಿರುವ ನೀರಿನ ಅಭಾವದ ಕುರಿತ ವಸ್ತುಸ್ಥಿತಿಯನ್ನು ಅವಲೋಕಿಸಿದರು. ಭತ್ತದ ಬೆಳೆ ಸಮೃದ್ಧವಾಗಿ ಬೆಳೆಯಲು ಕಾಲುವೆಯಲ್ಲಿ ನಿಗದಿತ ಪ್ರಮಾಣದ ನೀರು ಹರಿಯುವುದು ಅವಶ್ಯಕವಾಗಿದ್ದು, ಆಯಾ ಭಾಗದ ರೈತರಿಗೆ ತೊಂದರೆಯಾಗದಂತೆ ನೀರು ನಿರ್ವಹಣೆ ಮಾಡುವಂತೆ ರೈತರು ಗಂಗಾಧರ ಸ್ವಾಮಿ ಅವರಿಗೆ ಮನವಿ ಮಾಡಿದರು.

‘ಕಾಲುವೆಯ ಕೊನೆಯ ಭಾಗದ ರೈತರಿಗೂ ನ್ಯಾಯಯುತವಾಗಿ ನೀರು ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಯಾವುದೇ ಅಡೆತಡೆಗಳಿದ್ದಲ್ಲಿ ತಕ್ಷಣವೇ ಸರಿಪಡಿಸಬೇಕು’ ಎಂದು ಸ್ಥಳದಲ್ಲಿದ್ದ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೀರಾವರಿ ಸೌಲಭ್ಯ ಒದಗಿಸಲು ಜಿಲ್ಲಾಡಳಿತ ಬದ್ಧವಾಗಿದೆ ಎಂದು ರೈತರಿಗೆ ಭರವಸೆ ನೀಡಿದರು.

ಭದ್ರಾ ಅಚ್ಚುಕಟ್ಟು ಪ್ರದೇಶದ ಕೊನೆ ಭಾಗಕ್ಕೆ ನೀರು ತಲುಪದೇ ಬೆಳೆ ಒಣಗಿದ ಬಗ್ಗೆ ‘ಪ್ರಜಾವಾಣಿ’ ವರದಿ ಮಾಡಿತ್ತು.

ನೀರಾವರಿ ಇಲಾಖೆಯ ಎಂಜಿನಿಯರ್ಗಳಾದ ಪ್ರವೀಣ್, ಕೃಷ್ಣಮೂರ್ತಿ, ತಹಶೀಲ್ದಾರ್ ಸಂತೋಷ್ ಕುಮಾರ್, ಆರ್ಐ ಆನಂದ್, ಪಿಎಸ್ಐ ಹಾರೂನ್ ಅಖ್ತರ್, ವಿಎ ಜಿ. ಶಿವಪ್ರಕಾಶ್, ಅಚ್ಚುಕಟ್ಟು ಪ್ರದೇಶದ ರೈತರಾದ ಬಲ್ಲೂರು ಗಂಗಪ್ಪ, ಕೆ. ಪ್ರಶಾಂತ, ಬಾಗಜ್ಜೆರ ಚಂದ್ರಪ್ಪ, ಎಚ್. ನಾರಾಯಣಪ್ಪ, ರಂಗನಾಥ, ಧನ್ಯಕುಮಾರ್, ಹಣಚಿಕ್ಕಿ ರೇವಣಸಿದ್ದಪ್ಪ, ರವಿಕುಮಾರ್, ಜೋಗಪ್ಪರ ರವಿ, ಗೊಡ್ಡೆಮ್ಮಿ ಧನಂಜಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-43-1641093229

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.