ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾ ಉಪ ಕಣಿವೆ ಯೋಜನೆ: ಕಾಮಗಾರಿ ಪರಿಶೀಲಿಸಿದ ಶಾಸಕ ಕೆ.ಎಸ್.ಆನಂದ್

Published 10 ಮೇ 2024, 13:53 IST
Last Updated 10 ಮೇ 2024, 13:53 IST
ಅಕ್ಷರ ಗಾತ್ರ

ಕಡೂರು: ತಾಲ್ಲೂಕಿನ 118 ಕೆರೆಗಳಿಗೆ ನೀರುಣಿಸುವ ಭದ್ರಾ ಉಪಕಣಿವೆ ಯೋಜನೆಯ ಕಾಮಗಾರಿಯನ್ನು ಶಾಸಕ ಕೆ.ಎಸ್.ಆನಂದ್ ಪರಿಶೀಲನೆ ನಡೆಸಿದರು.

ಕಾಮಗಾರಿ ನಡೆಯುತ್ತಿರುವ ದೊಡ್ಡಘಟ್ಟ ಸೇರಿದಂತೆ ವಿವಿಧೆಡೆ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು ಕಾಮಗಾರಿಯ ಮಾಹಿತಿ ಪಡೆದರು.

‘ತಾಲ್ಲೂಕಿನ 118 ಕೆರೆಗಳೂ ಸೇರಿದಂತೆ ತರೀಕೆರೆ, ಚಿಕ್ಕಮಗಳೂರು ಹಾಗೂ ತರೀಕೆರೆ ಕ್ಷೇತ್ರಗಳ ಕೆರೆಗಳು ಈ ಯೋಜನೆಯಲ್ಲಿ ಸೇರಿವೆ. ಮದಗದ ಕೆರೆಗೆ ಬೀರೂರು ಬಳಿಯ ದೇವನಕೆರೆ ವರೆಗೆ ಗುರುತ್ವಾಕರ್ಷಣಾ ಶಕ್ತಿ ಮೂಲಕ ನೀರು ಬರಲಿದ್ದು, ಅಲ್ಲಿಂದ ಮದಗದ ಕೆರೆ ಮತ್ತು ಅದರ ಆಶ್ರಿತ 18 ಕೆರೆಗಳಿಗೆ ಪಂಪ್ ಮೂಲಕ ನೀರು ಪೂರೈಕೆಸಲು ಪಂಪ್ ಹೌಸ್ ಕಾಮಗಾರಿ ಪ್ರಗತಿಯಲ್ಲಿದೆ. ಮೂರು ಕಡೆ ಭೂ ಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ’ ಎಂದು ತಿಳಿಸಿದರು.

‘ತಂಗಲಿ‌ ಮತ್ತು ವಿಷ್ಣು ಸಮುದ್ರ ಕೆರೆಗಳಿಗೆ ನೀರನ್ನು ರಾಷ್ಟ್ರೀಯ ಹೆದ್ದಾರಿ ಪಕ್ಕವೇ ಪೈಪ್ ಮೂಲಕ ಕೊಂಡೊಯ್ಯಬೇಕಿದೆ. ಈ ಕಾರ್ಯಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅನುಮತಿ ಬೇಕಿದ್ದು, ಅನುಮತಿ ಕೋರಿ ನಿಗಮದ ಮೂಲಕ ಪತ್ರ ಬರೆಯಲಾಗಿದೆ. ಕಾಮಗಾರಿಗಳಿಗೆ ಇರುವ ಅಡೆತಡೆ ನಿವಾರಿಸಿ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ನಿಗಮದ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.

ಒಂದೂವರೆ ವರ್ಷದಲ್ಲಿ ಈ ಯೋಜನೆ ಅನುಷ್ಠಾನಗೊಂಡು ತಾಲ್ಲೂಕಿನ ಕೆರೆಗಳು ನೀರಿನಿಂದ ತುಂಬಿಸಬೇಕು ಎಂಬ ಗುರಿ ಇದೆ ಎಂದರು.

ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿ ಹರ್ಷ ಜತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT