ಭಾನುವಾರ, ನವೆಂಬರ್ 27, 2022
26 °C
ಭಾರತ ಜೋಡೊ ಪಾದಯಾತ್ರೆ ಪೂರ್ವಭಾವಿ ಸಭೆಯಲ್ಲಿ ಡಾ.ಅಂಶುಮಂತ್

ಬೆಲೆ ಏರಿಕೆಯೇ ಬಿಜೆಪಿ ಸಾಧನೆ: ಡಾ.ಅಂಶುಮಂತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತರೀಕೆರೆ: ‘ಬೆಲೆ ಏರಿಕೆಯೇ ಬಿಜೆಪಿ ಸರ್ಕಾರದ ಸಾಧನೆಯಾಗಿದೆ’ ಎಂದು ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಾ. ಅಂಶುಮಂತ್ ಹೇಳಿದರು.

ಪಟ್ಟಣದದಲ್ಲಿ ನಡೆದ ಭಾರತ ಜೋಡೊ ಪಾದಯಾತ್ರೆ ಪೂರ್ವಭಾವಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ, ಅಭಿವೃದ್ಧಿಗೆ ಗಮನ ನೀಡುತ್ತಿಲ್ಲ. ಜಿಎಸ್‌ಟಿ ಸಮಸ್ಯೆ, ಮತೀಯ ಗಲಭೆಗಳು ಹೆಚ್ಚುತ್ತಿವೆ ಎಂದು ಆರೋಪಿಸಿದರು.

ಮಾಜಿ ಶಾಸಕ ಎಸ್.ಎಂ. ನಾಗರಾಜು ಮಾತನಾಡಿ, ಭಾರತ ಜೋಡೊ ಪಾದಯಾತ್ರೆಯಲ್ಲಿ ಹೆಚ್ಚಿನ ಕಾರ್ಯಕರ್ತರು ಭಾಗವಹಿಸಿ, ಯಶಸ್ವಿಗೂಳಿಸಬೇಕು ಎಂದರು.

ಮಾಜಿ ಶಾಸಕ ಟಿ.ಎಚ್. ಶಿವಶಂಕರಪ್ಪ ಮಾತನಾಡಿ, ದೇಶದ ಭವಿಷ್ಯ ಯುವಕರ ಕೈಯಲ್ಲಿದೆ ಯುವಕರು ಪಾದಯಾತ್ರೆಯಲ್ಲಿ ಭಾಗಿಯಾಗಬೇಕು ಎಂದರು.

ಮಾಜಿ ಶಾಸಕ ಜಿ.ಎಚ್. ಶ್ರೀನಿವಾಸ್ ಮಾತನಾಡಿ, ‘ಗುತ್ತಿಗೆದಾರರಿಂದ ಶೇ 40 ಕಮಿಷನ್ ಪಡೆಯುವುದೆ ಬಿಜೆಪಿ ಸರ್ಕಾರದ ಸಾಧನೆ. ಸುಸ್ಥಿರ ಸುಭದ್ರ ಆಡಳಿತ ನೀಡುವುದು ಕಾಂಗ್ರೆಸ್‌ ಧ್ಯೇಯ ಎಂದರು.

ಮುಖಂಡರಾದ ಟಿ.ವಿ. ಶಿವಶಂಕರಪ್ಪ, ಎಚ್.ಎಂ. ಗೋಪಿಕೃಷ್ಣ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಧ್ರುವಕುಮಾರ್, ದೋರನಾಳ್ ಪರಮೇಶ್, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಫಾರೂಕ್, ಎಚ್.ವಿಶ್ವನಾಥ್, ಶಿವನಂದಸ್ವಾಮಿ ಮಾತನಾಡಿದರು.

ಪುರಸಭಾಧ್ಯಕ್ಷೆ ಕಮಲ ರಾಜೇಂದ್ರ, ಮಾಜಿ ಅಧ್ಯಕ್ಷ ವರ್ಮ ಪ್ರಕಾಶ್, ಅಜ್ಜಂಪುರ ಕೃಷ್ಣಮೂರ್ತಿ, ಸಂತೋಷ್,ಆದಿಲ್ ಪಾಷ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು