ಬೀರೂರು (ಕಡೂರು): ಗಾಂಜಾ ಸೇವಿಸಿ ಪಟ್ಟಣದ ರೈಲ್ವೆ ನಿಲ್ದಾಣದ ಬಳಿಯ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯನ್ನು ಬೀರೂರು ಪೊಲೀಸರು ಬಂಧಿಸಿದ್ದಾರೆ.

ಬೀರೂರು ಪಟ್ಟಣದ ಸರ್ಕಾರಿ ಆಸ್ಪತ್ರೆ ಹಿಂಭಾಗದ ನಿವಾಸಿ, ಚಾಲಕ ಆಕೀಬ್ ಅಹಮದ್ (23) ಆರೋಪಿ.

ಬೀರೂರು ಪೊಲೀಸರು ಸೋಮವಾರ ಪಟ್ಟಣದಲ್ಲಿ ಗಸ್ತು ನಡೆಸುವ ಸಂದರ್ಭ ಅನುಮಾನಾಸ್ಪದವಾಗಿ ಕಂಡುಬಂದಿದ್ದರಿಂದ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಬಳಿಕ, ಆತನನ್ನು ಬೀರೂರಿನ ಸಾರ್ವ ಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆಕೀಬ್ ಅಹಮದ್ ಗಾಂಜಾ ಸೇವನೆ ಮಾಡಿದ್ದಾನೆ ಎಂದು ವೈದ್ಯಾಧಿಕಾರಿ ವರದಿ ನೀಡಿದ್ದಾರೆ. ಆತನ ವಿರುದ್ಧ ಬೀರೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-126-1415590211

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.