ಬೀರೂರು (ಕಡೂರು): ಪಟ್ಟಣದಲ್ಲಿ ಮೇ 19 ಹಾಗೂ 20 ರಂದು ಭ್ರಮರಾಂಬ ಸಹಿತ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ಕಲ್ಯಾಣೋತ್ಸವ ಹಾಗೂ ಶ್ರೀಶೈಲದ ಪೀಠಾಧೀಶ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರಿಂದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮಸಭೆ ನೆರವೇರಲಿದೆ ಎಂದು ರಂಭಾಪುರಿ ಖಾಸಾಶಾಖಾ ಮಠದ ರುದ್ರಮುನಿ ಶಿವಾಚಾರ್ಯರು ತಿಳಿಸಿದರು.

ಪಟ್ಟಣದ ರಂಭಾಪುರಿ ಶಾಖಾ ಮಠದಲ್ಲಿ ಸೋಮವಾರ ಧಾರ್ಮಿಕ ಕಾರ್ಯಕ್ರಮದ ಆಹ್ವಾನಪತ್ರಿಕೆ ಬಿಡುಗಡೆ ಮಾಡಿ ಬಳಿಕ ಮಾತನಾಡಿದರು.

ಲೋಕ ಕಲ್ಯಾಣಾರ್ಥವಾಗಿ ಹಾಗೂ ಸನಾತನ ಪರಂಪರೆ ಉಳಿಸುವ ನಿಟ್ಟಿನಲ್ಲಿ ಮತ್ತು ಸಮಾಜದ ಒಳಿತಿಗಾಗಿ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯ ಕಲ್ಯಾಣೋತ್ಸವ ಹಾಗೂ ಇಷ್ಟಲಿಂಗ ಮಹಾಪೂಜೆಯನ್ನು ಹಳೇ ಮೈಸೂರು ಭಾಗದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದೆ.ಭಕ್ತರ ನೆರವಿನಿಂದ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮೇ 18ರಂದು ಬೀರೂರು ಪಟ್ಟಣಕ್ಕೆ ಬರುವ ಶ್ರೀಶೈಲದ ಪೀಠಾಧೀಶ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು, 19ರಂದು ಬೆಳಿಗ್ಗೆ ಪಟ್ಟಣದ ಜಗದ್ಗುರು ರೇಣುಕಾಚಾರ್ಯ ಮಂಗಲಮಂದಿರದಲ್ಲಿ ಇಷ್ಟಲಿಂಗ ಮಹಾಪೂಜೆ ನೆರವೇರಿಸುವರು. ಸಂಜೆ ಭ್ರಮರಾಂಬ ಸಹಿತ ಶ್ರೀಶೈಲ ಮಲ್ಲಿಕಾರ್ಜುನಸ್ವಾಮಿಯ ಪುರ ಪ್ರವೇಶ ನಂತರ ಧರ್ಮಸಭೆ, ರಾತ್ರಿ ಪ್ರಸಾದ ವಿನಿಯೋಗ ನಡೆಯಲಿದೆ. 20ರಂದು ಬೆಳಿಗ್ಗೆ ಶ್ರೀಭ್ರಮರಾಂಬ ಸಹಿತ ಶ್ರೀಶೈಲ ಮಲ್ಲಿಕಾರ್ಜುನಸ್ವಾಮಿಯ ಉತ್ಸವವು ಪಟ್ಟಣದ ರಾಜಬೀದಿಗಳಲ್ಲಿ ನಡೆಯಲಿದೆ. ಸಂಜೆ ಜಗದ್ಗುರು ರೇಣುಕಾಚಾರ್ಯ ಮಂಗಲ ಮಂದಿರದಲ್ಲಿ ಶ್ರೀಶೈಲ ಪೀಠದ ಆಗಮಿಕರ, ಪುರೋಹಿತರ ನೇತೃತ್ವದಲ್ಲಿ ಭ್ರಮರಾಂಬ ಸಹಿತ ಮಲ್ಲಿಕಾರ್ಜುನ ಸ್ವಾಮಿಯವರ ಕಲ್ಯಾಣೋತ್ಸವ ನಡೆಯಲಿದೆ ಎಂದು ಹೇಳಿದರು.

ಬೀರೂರು ಪಟ್ಟಣದ ಶಿವಾನಂದಾಶ್ರಮ ಟ್ರಸ್ಟ್, ಜಗದ್ಗುರು ರೇಣುಕ ಸಾಂಸ್ಕೃತಿಕ ಸಂಘ, ಜಗದ್ಗುರು ರೇಣುಕಾಚಾರ್ಯ ಮಂಗಲ ಮಂದಿರದ ಸಮಿತಿಯ ಸಹಯೋಗದಲ್ಲಿ ಧಾರ್ಮಿಕ ಕಾರ್ಯಗಳು ನೆರವೇರಲಿವೆ. ಸಮಸ್ತ ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಜತೆಗೆ ತಮ್ಮ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿ.ಪಿ.ನವೀನ್, ಎಸ್.ಎನ್.ಕುಮಾರಶಾಸ್ತ್ರಿ, ಎಂ.ವಿ.ರುದ್ರೇಶ್, ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-126-1018662197

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.