ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡಾ.ವಾಮದೇವಗೆ ವಿಶಿಷ್ಟ ಸೇವಾ ಪುರಸ್ಕಾರ

Published 9 ಜುಲೈ 2024, 13:01 IST
Last Updated 9 ಜುಲೈ 2024, 13:01 IST
ಅಕ್ಷರ ಗಾತ್ರ

ಬೀರೂರು: ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಹಳೆ ವಿದ್ಯಾರ್ಥಿಗಳ ಒಕ್ಕೂಟ ನೀಡುವ ‘ವಿಶಿಷ್ಟ ಸೇವಾ ಪುರಸ್ಕಾರ’ಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿವೃತ್ತ ನಿರ್ದೇಶಕ ಡಾ.ಜಿ.ಎಂ.ವಾಮದೇವ ಆಯ್ಕೆಯಾಗಿದ್ದಾರೆ.

ಮೂಲತಃ ಕಡೂರು ತಾಲ್ಲೂಕು ಗಿರಿಯಾಪುರದವರಾದಡಾ.ವಾಮದೇವ ಬೆಂಗಳೂರು, ಮೈಸೂರು, ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೋಗ್ಯಾಧಿಕಾರಿ, ಅಧೀಕ್ಷಕರಾಗಿ ಸೇವೆ ಸಲ್ಲಿಸಿದ್ದು, ಪ್ರತಿವರ್ಷ ಗಿರಿಯಾಪುರದಲ್ಲಿ ಆರೋಗ್ಯ ಶಿಬಿರ, ವಿವಿಧ ವೈಜ್ಞಾನಿಕ ಚಟುವಟಿಕೆ ಹಮ್ಮಿಕೊಳ್ಳುತ್ತಿದ್ದಾರೆ. ಜುಲೈ 14ರಂದು ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಪ್ರಶಸ್ತಿ ಪ್ರದಾನ ಮಾಡುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT