ಬೀರೂರು(ಕಡೂರು): ‘ಆಸ್ತಿ ತೆರಿಗೆ ಮತ್ತು ನೀರಿನ ಕಂದಾಯ ಪಾವತಿಸುವ ಮೂಲಕ ಪಟ್ಟಣದ ಅಭಿವೃದ್ಧಿಗೆ ಸಾರ್ವಜನಿಕರು ಸಹಕರಿಸಬೇಕು’ ಎಂದು ಬೀರೂರು ಪುರಸಭೆಯ ಮುಖ್ಯಾಧಿಕಾರಿ ಮಂಜುನಾಥ್ ಕರೆ ನೀಡಿದರು.

ಬೀರೂರು ಪುರಸಭೆಯಲ್ಲಿ ಗುರುವಾರ ಮಾಜಿ ಸದಸ್ಯರು ಮತ್ತು ಸಾರ್ವಜನಿಕರು ಹಮ್ಮಿಕೊಂಡಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಜಾಕ್ವೆಲ್ನಲ್ಲಿ ಸಮಸ್ಯೆ ಎದುರಾಗಿತ್ತು, ಬಂದ ದಿನವೇ ಅದನ್ನು ಪರಿಹರಿಸಲು ಕ್ರಮ ವಹಿಸಲಾಗಿದೆ. ಪುರಸಭೆಗೆ 21 ಪೌರಕಾರ್ಮಿಕರ ನೇಮಕಕ್ಕೆ ಅನುಮೋದನೆ ದೊರೆತಿದೆ. ಹಿರಿಯಂಗಳ ಸಮೀಪ ನಿರ್ಮಾಣವಾಗುತ್ತಿರುವ ಕಸ ವಿಲೇವಾರಿ ಘಟಕ, ಪಟ್ಟಣದಲ್ಲಿ ಸಂಚಾರ ವ್ಯವಸ್ಥೆ, ಕ್ಯಾಂಪ್ ಭಾಗದಲ್ಲಿ ಓವರ್ಹೆಡ್ ಟ್ಯಾಂಕ್ ಶೀಘ್ರ ಕಾರ್ಯಾರಂಭ ಸೇರಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಪುರಸಭೆ ಮಾಜಿ ಸದಸ್ಯರಾದ ಎನ್.ಎಂ. ನಾಗರಾಜ್, ಬಿ.ಆರ್. ಮೋಹನ್ ಕುಮಾರ್ ಮತ್ತು ಮುಖಂಡರಾದ ಮೋಹನ್, ವೆಂಕಟೇಶ್, ಮಲ್ಲಿಕಾರ್ಜುನ್, ಗಣೇಶ್, ರುದ್ರೇಶ್, ಪುರಸಭೆ ಪರಿಸರ ಅಭಿಯಂತರ ನೂರುದ್ದೀನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-126-918988510

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.