ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಟ್ಟಿಗೆಹಾರ: ಹೆದ್ದಾರಿಯಲ್ಲಿ ಕಾಡುಕೋಣ ಪ್ರತ್ಯಕ್ಷ, ಆತಂಕ

Last Updated 21 ಸೆಪ್ಟೆಂಬರ್ 2022, 6:36 IST
ಅಕ್ಷರ ಗಾತ್ರ

ಕೊಟ್ಟಿಗೆಹಾರ: ಬಾಳೂರು ಹೋಬಳಿಯ ಜಾವಳಿ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಕಾಡುಕೋಣ ಪ್ರತ್ಯಕ್ಷವಾಗಿದ್ದು ವಾಹನ ಸವಾರರಲ್ಲಿ ಆತಂಕ ಸೃಷ್ಟಿಯಾಗಿದೆ.

ಈಚೆಗೆ ಬಣಕಲ್ ಸಮೀಪದ ಕಾಡುಗದ್ದೆಯ ಎಸ್ಟೇಟ್ ಬಳಿ, ರಸ್ತೆಯಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿತ್ತು. ಪ್ರವಾಸಿಗರು ನಿತ್ಯ ಈ ರಸ್ತೆಯಲ್ಲಿ ಸಂಚರಿಸುವುದರಿಂದ ಕಾಡುಕೋಣಗಳ ಹಿಂಡನ್ನು ಕಾಡಿಗೆ ಓಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹೇಮಾವತಿ, ಜಾವಳಿ, ಹಟ್ಟಿಹರ, ಮಲೆಮನೆ, ದುರ್ಗದಹಳ್ಳಿ, ಬಲಿಗೆ, ಮೇಗೂರು, ಕೆಳಗೂರು ಭಾಗದಲ್ಲಿ ಕಾಡುಕೋಣಗಳ ಹಿಂಡು ಸಂಚರಿಸುತ್ತಿವೆ. ಈಚೆಗೆ ಆಹಾರ ಅರಸಿ ರಸ್ತೆ ಕಡೆಗೂ ಬರಲು ಆರಂಭಿಸಿವೆ. ಅರಣ್ಯ ಇಲಾಖೆ ಗಮನ ಹರಿಸಬೇಕು ಎಂದು ಗ್ರಾಮಸ್ಥ ಪರೀಕ್ಷಿತ್ ಜಾವಳಿ ಒತ್ತಾಯಿಸಿದ್ದಾರೆ.

‘ರಸ್ತೆಗೆ ಬರುವ ಕಾಡುಕೋಣಗಳ ಹಿಂಡನ್ನು ಪಟಾಕಿ ಸಿಡಿಸಿ ಕಾಡಿಗೆ ಓಡಿಸಲು ಪ್ರಯತ್ನಿಸಲಾಗುವುದು’ ಎಂದು ಉಪ ವಲಯ ಅರಣ್ಯ ಅಧಿಕಾರಿ ಚಂದನ್‌ಗೌಡ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT