ಬುಧವಾರ, ಮೇ 25, 2022
31 °C

ಬಿಟ್‌ ಕಾಯಿನ್‌: ಸಿದ್ದರಾಮಯ್ಯ ಹೇಳಿಕೆ ಹಾಸ್ಯಾಸ್ಪದ ಎಂದ ಸಿ.ಟಿ. ರವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಮಗಳೂರು: ‘ಬಿಟ್‌ ಕಾಯಿನ್‌ ವಿಚಾರದಲ್ಲಿ ನಾನು ಆರೋಪ ಮಾಡಿದ್ದೇನೆ, ದಾಖಲೆ ನೀವು ಬಿಡುಗಡೆ ಮಾಡಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ. ಆರೋಪ ಮಾಡಿದವರು, ದಾಖಲೆ ಬಿಡುಗಡೆ ಮಾಡಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿಟ್‌ ಕಾಯಿನ್‌ನಲ್ಲಿ ಯಾರು ಭಾಗಿಯಾಗಿದ್ದರೂ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಯಾರನ್ನೂ ಬಚಾವ್‌ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಪ್ರತಿಕ್ರಿಯಿಸಿದರು.

‘ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಶ್ರೀಕಿ ಎಂಬುವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ, ಸಾಕ್ಷ್ಯ ಇದ್ದರೆ ತನಿಖಾಧಿಕಾರಿ, ನ್ಯಾಯಾಧೀಶರಿಗೆ ನೀಡಿ ಸಹಕರಿಸಬೇಕು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು