ಶುಕ್ರವಾರ, ಆಗಸ್ಟ್ 12, 2022
27 °C

ರಾಗಿಣಿಗೂ ಬಿಜೆಪಿಗೂ ಸಂಬಂಧವಿಲ್ಲ: ಸಿ.ಟಿ.ರವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ‘ನಟಿ ರಾಗಿಣಿ ದ್ವಿವೇದಿಗೆ ಬಿಜೆಪಿಯಲ್ಲಿ ನೇರವಾಗಿ ಯಾವುದೇ ಜವಾಬ್ದಾರಿ ಇಲ್ಲ. ಪಕ್ಷಕ್ಕೂ ಅವರಿಗೂ ಸಂಬಂಧ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಗಿಣಿ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ತಪ್ಪು ಯಾರೇ ಮಾಡಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇವೆ ಎಂಬುದಕ್ಕೆ ತನಿಖೆ ಧಾಟಿಯೇ ಸಾಕ್ಷಿ. ರಾಜಿ ಮಾಡಿಕೊಂಡು ಅವರ ಜತೆಯೇ ಅಡ್ಜಸ್ಟ್‌ಮೆಂಟ್‌ ಮಾಡಿಕೊಂಡು ರಾಜಕಾರಣ ಮಾಡಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು’ ಎಂದರು.

‘ರಾಜ್ಯದಲ್ಲಿ ಡ್ರಗ್ ಪ್ರಕರಣ ಹೊಸದಲ್ಲ. ಆದರೆ, ತನಿಖೆಯನ್ನು ಇಷ್ಟು ಗಂಭೀರವಾಗಿ ಪರಿಗಣಿಸಿರುವುದು ಇದೇ ಮೊದಲು. ತನಿಖೆ ಎಳೆ ಯಾರ‍್ಯಾರ ಮನೆ ಬಾಗಿಲಿಗೆ ಒಯ್ಯುತ್ತದೋ ಗೊತ್ತಿಲ್ಲ. ತನಿಖಾಧಿಕಾರಿಗಳ ಮೇಲೆ ಒತ್ತಡ ತರುತ್ತಿದ್ದಾರೆಂದು ಮಾರ್ಮಿಕವಾಗಿ ಹೇಳಿದ್ದೇನೆ. ನಮ್ಮ ಮೇಲೆ ಒತ್ತಡ ತರುತ್ತಿದ್ದಾರೆ ಎಂದು ಹೇಳಿಲ್ಲ. ಯಾರು ಮಾತು ಕೇಳುತ್ತಾರೆ ಅನಿಸುತ್ತೋ ಅವರ ಮೇಲೆ ಒತ್ತಡ ತರುತ್ತಾರೆ. ನಮ್ಮ ಸರ್ಕಾರ ಒತ್ತಡಕ್ಕೆ ಮಣಿಯಲ್ಲ’ ಎಂದು ಉತ್ತರಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು