ಕಾಂಗ್ರೆಸ್ ತೊರೆದಿರುವವರು ವಾಪಸ್ ಆ ಪಕ್ಷಕ್ಕೆ ಹೋಗಲ್ಲ: ಸಿ.ಟಿ.ರವಿ

ಚಿಕ್ಕಮಗಳೂರು: ‘ಕಾಂಗ್ರೆಸ್ ತೊರೆದು ಬಂದಿರುವವರು ಮತ್ತೆ ಆ ಪಕ್ಷಕ್ಕೆ ಹೋಗಲ್ಲ. ದೇಶದ ಉದ್ದಗಲಕ್ಕೂ ತುಂಬಾ ಜನ ಕಾಂಗ್ರೆಸ್ ಬಿಡುತ್ತಿದ್ದಾರೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಕಾಂಗ್ರೆಸ್‌ನಲ್ಲಿ ಇದ್ದವರಿಗೇ ನೆಲೆ ಇಲ್ಲ. ಅಲ್ಲಿರುವವರು ಹಗಲುಗನಸು ಕಾಣುತ್ತಿದ್ದಾರೆ. ಚುನಾವಣೆಗೆ ಇನ್ನು ಎರಡು ವರ್ಷ ಇದೆ. ಕಾಂಗ್ರೆಸ್‌ನಲ್ಲಿ ಈಗಲೇ ಸಿ.ಎಂ ಕುರ್ಚಿಗೆ ಕಿತ್ತಾಡುತ್ತಿದ್ದಾರೆ. ಇಲ್ಲದೇ ಇರುವ ಸಿ.ಎಂ ಕುರ್ಚಿಗೆ ಗುದ್ದಾಡುವ ಸ್ಥಿತಿಯಲ್ಲಿರುವ ಪಕ್ಷಕ್ಕೆ ಯಾರು ಹೋಗುತ್ತಾರೆ?’ ಎಂದು ಪ್ರಶ್ನಿಸಿದರು.
‘ಕಾಂಗ್ರೆಸ್‌ನ ತುಂಬಾ ಜನ ಸಂಪರ್ಕದಲ್ಲಿ ಇದ್ದಾರೆ. ಯಾರನ್ನು ಸೇರಿಸಿಕೊಳ್ಳಬೇಕು ಎಂಬುದನ್ನು ವಿವೇಚನೆ ಬಳಸಿ ನಿರ್ಧರಿಸುತ್ತೇವೆ. ಸಮಾಜ, ಪಕ್ಷಕ್ಕೆ ಶಕ್ತಿ ತುಂಬುವ ತಾಕತ್ತು ಇರುವವರನ್ನು ಸೇರಿಸಿಕೊಳುತ್ತೇವೆ’ ಎಂದು ಉತ್ತರಿಸಿದರು.
‘ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಉಸ್ತುವಾರಿ ಅವರು ಅರುಣ್ ಸಿಂಗ್ ಅವರು ಗಮನಿಸುತ್ತಾರೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.