ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಕಾಂಗ್ರೆಸ್‌ ತೊರೆದರೆ ಆಶ್ಚರ್ಯ ಇಲ್ಲ: ಸಿ.ಟಿ.ರವಿ

Last Updated 12 ಮಾರ್ಚ್ 2022, 12:23 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ತೊರೆದರೆ ಆಶ್ಚರ್ಯ ಇಲ್ಲ. ಅವರ ಆಪ್ತರಾದ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್‌ನಿಂದ ಹೊರಕ್ಕೆ ಕಾಲಿಟ್ಟಿದ್ದಾರೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಅವರೆಲ್ಲ ಬಹಳ ದೋಸ್ತಿಗಳು. ಇಬ್ರಾಹಿಂ ಅವರನ್ನು ಮುಂದೆ ಕಳುಹಿಸಿ ನಂತರ ಅವರ ಹೋಗಬಹುದು’ ಎಂದು ಕುಟುಕಿದರು.

‘ಆಮಿಷವೊಡ್ಡಿ ಪಕ್ಷದ ಸದಸ್ಯತ್ವ ಮಾಡಿಸಿದರೆ ಆ ಸದಸ್ಯರಿಗೆ ಪಕ್ಷ ಬದ್ಧತೆ ಇರಲ್ಲ. ಪಕ್ಷದ ವಿಚಾರಧಾರೆ, ನಾಯಕತ್ವದ ಮೇಲೆ ನಂಬಿಕೆ ಇಟ್ಟು ಸದಸ್ಯರಾದವರು ಮಾತ್ರ ಪಕ್ಷದಲ್ಲಿ ಉಳಿದುಕೊಳ್ಳುತ್ತಾರೆ. ಕಾಂಗ್ರೆಸ್‌ನಲ್ಲಿ ಇದಾವುದೂ ಆಗುತ್ತಿಲ್ಲ’ ಎಂದು ಪ್ರತಿಕ್ರಿಯಿಸಿದರು.

‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳಿಸಲಿದೆ. 2023 ಮಾರ್ಚ್‌ ನಂತರ ಚುನಾವಣೆ ನಡೆಯಲಿದೆ. ಅದಕ್ಕೆ ಮುಂಚೆ ಚುನಾವಣೆಗೆ ಹೋಗುವ ಅನಿವಾರ್ಯ ಪಕ್ಷ, ರಾಜ್ಯದ ದೃಷ್ಟಿಯಿಂದ ಇಲ್ಲ’ ಎಂದು ಉತ್ತರಿಸಿದರು.

‘ನಾಯಕತ್ವದ ಬದಲಾವಣೆ ಇಲ್ಲ ಎಂದು ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಸಂಪುಟ ಪುನರ್‌ ರಚನೆ ಮಾಡಬೇಕು ಎಂಬುದು ಬಹಳಷ್ಟು ಶಾಸಕರ ಅಪೇಕ್ಷೆಯಾಗಿದೆ’ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT