ಶುಕ್ರವಾರ, ಡಿಸೆಂಬರ್ 2, 2022
23 °C

ಭಾರತ್‌ ಜೋಡೊ ಯಾತ್ರೆಯಲ್ಲ, ಕಾಂಗ್ರೆಸ್ ತೋಡೊ ಯಾತ್ರೆ: ಈಶ್ವರಪ್ಪ ವ್ಯಂಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಚಿಕ್ಕಮಗಳೂರು: ‘ಭಾರತ್‌ ಜೋಡೊ ಯಾತ್ರೆಯು ಕಾಂಗ್ರೆಸ್ ತೊಡೊ ಯಾತ್ರೆ ಆಗುತ್ತಿದೆ. ಯಾತ್ರೆ ಶುರುವಾದ ದಿನದಿಂದ ಆ ಪಕ್ಷ ಕುಗ್ಗುತ್ತಿದೆ’ ಎಂದು ಬಿಜೆಪಿ ಶಾಸಕ ಕೆ.ಎಸ್‌.ಈಶ್ವರಪ್ಪ ಟೀಕಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ರಾಜಸ್ಥಾನ ಮುಖ್ಯಮಂತ್ರಿ ಕೈಕೊಟ್ಟಿದ್ದಾರೆ, 95 ಶಾಸಕರು ಕಾಂಗ್ರೆಸ್‌ ತೊರೆದಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷರು ಯಾರಾಗಬೇಕು ಎಂಬ ನಿಟ್ಟಿನಲ್ಲೂ ಗುಂಪುಗಾರಿಕೆ ಬೆಳೆಯುತ್ತಿದೆ’ ಎಂದು ಲೇವಡಿ ಮಾಡಿದರು. 

‘ರಾಜ್ಯದಲ್ಲಿ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್‌ ಪೇ–ಸಿಎಂ ಷಡ್ಯಂತ್ರದಲ್ಲಿ ತೊಡಗಿದೆ. ಆ ತಂತ್ರ ಫಲಿಸಲ್ಲ’ ಎಂದು ಉತ್ತರಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು