ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಪ್ರವೀಣ್ ನೆಟ್ಟಾರು ಹಂತಕರನ್ನು, ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ, ಜಿಲ್ಲೆಯ 9 ಮಂಡಲಗಳ ಅಧ್ಯಕ್ಷರು ಬುಧವಾರ ರಾಜೀನಾಮೆ ನೀಡಿದ್ದಾರೆ.
ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್ ಹರಿವಿನಗಂಡಿ ಸಹಿತ ಎಲ್ಲ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರವೀಣ್ ಸಾವು ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟ. ರಾತ್ರಿ ಸಮಯದಲ್ಲಿ ಹಿಂದಿನಿಂದ ಬಂದು ಹೊಡೆದಿರುವುದು ಹೇಡಿಗಳ ಕೃತ್ಯವಾಗಿದೆ. ಬಿಜೆಪಿ ಯುವ ಮೋರ್ಚಾದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದ ಹುಡುಗ ಸಮಾಜಕ್ಕಾಗಿ ಪ್ರಾಣ ತೆತ್ತಿರುವುದು ದುರ್ದೈವದ ಸಂಗತಿ. ಆರೋಪಿಗಳನ್ನು ಬಂಧಿಸಿ ಉಗ್ರ ಶಿಕ್ಷೆ ವಿಧಿಸಬೇಕು. ಮುಂದೆ ಇಂಥ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು.
ಹಿಂದೆ ನಡೆದ ಕೊಲೆಗಳಿಗೆ ಯಾವ ರೀತಿ ನ್ಯಾಯ ಸಿಕ್ಕಿದೆ ಎನ್ನುವುದು ನಮ್ಮ ಕಣ್ಣ ಮುಂದಿದೆ. ಕಠಿಣ ಕ್ರಮ ಎನ್ನುವುದು ಭರವಸೆಯಾಗೇ ಉಳಿದಿದೆ. ಹೀಗಾಗಿ ಜಿಲ್ಲಾ ಯುವ ಮೋರ್ಚಾ ಎಲ್ಲ ಪದಾಧಿಕಾರಿಗಳು, 9 ಮಂಡಲಗಳ ಅಧ್ಯಕ್ಷರು ಪಕ್ಷದ ಜವಾಬ್ದಾರಿಗೆ ರಾಜೀನಾಮೆ ನೀಡಿದ್ದೇವೆ ಎಂದು ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್ ಹರಿವಿನಗಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇವನ್ನೂ ಓದಿ...
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.