ಮಂಗಳವಾರ, ಅಕ್ಟೋಬರ್ 26, 2021
20 °C

ಹಾಸ್ಟೆಲ್‌ ಶೌಚಾಲಯ ಸ್ವಚ್ಛಗೊಳಿಸಿದ ಸಿ.ಟಿ.ರವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ‘ಎಲ್ಲರಲ್ಲೂ ಸ್ವಚ್ಛತೆಯ ಮನಸ್ಥಿತಿ ರೂಢಿಸಲು ಮಹಾತ್ಮ ಗಾಂಧಿ ಕಾಲದಿಂದಲೂ ಪ್ರಯತ್ನಗಳು ಸಾಗಿವೆ. ಆ ಪ್ರಯತ್ನಗಳು ಮತ್ತೊಬ್ಬರಿಗೆ ಪ್ರೇರಣೆ ನೀಡಿದರೆ ಮನಸ್ಥಿತಿ ಬದಲಾಗುತ್ತದೆ’ ಎಂದು ಶಾಸಕ ಸಿ.ಟಿ. ರವಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮನಸ್ಥಿತಿ ಬದಲಾಯಿಸದ ಹೊರತು ಪರಿಸ್ಥಿತಿ ಸುಧಾರಿಸಲು ಸಾಧ್ಯ ಇಲ್ಲ. ಇನ್ನೊಬ್ಬರಿಗೆ ಪ್ರೇರಣೆ ನೀಡುವ ದೃಷ್ಟಿಯಿಂದ ಹಾಸ್ಟೆಲ್‌ ಶೌಚಾಲಯ ಸ್ವಚ್ಛಗೊಳಿಸಿದ್ದೇನೆ’ ಎಂದರು.

‘ಕನ್ಹಯ್ಯ ಕುಮಾರ್‌ ಅವರು ತುಕ್ಡೆ ಗ್ಯಾಂಗ್‌ನ (ಕಾಂಗ್ರೆಸ್‌) ನಾಯಕ. ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ಅವರು ಏನು ಮಾಡಲು ಸಾಧ್ಯವಿಲ್ಲ’ ಎಂದು ಉತ್ತರಿಸಿದರು.

‘ಸರ್ಕಾರವು ಮತಾಂತರ ನಿಷೇಧಕ್ಕೆ ಕಠಿಣ ಕ್ರಮ ಕೈಗೊಂಡರೆ ಅದನ್ನು ಸ್ವಾಗತಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು