ಚಿಕ್ಕಮಗಳೂರು:‘ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಸಮಾಲೋಚಿಸಿ ತೀರ್ಮಾನಿಸಲಿದ್ದಾರೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯಿಸಿದರು.

ತಾಲ್ಲೂಕಿನ ದೇವೀರಮ್ಮ ಬೆಟ್ಟದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿಯವರ ಮನದಲ್ಲಿ ಸಂಪುಟ ಪುನರ್ರಚನೆ ಯೋಚನೆ ಇದೆ. ಚಿಕ್ಕಮಗಳೂರು ಜಿಲ್ಲೆಗೂ ಶೀಘ್ರದಲ್ಲಿ ಉಸ್ತುವಾರಿ ಸಚಿವರ ನೇಮಕ ಆಗುತ್ತದೆ’ ಎಂದು ಉತ್ತರಿಸಿದರು.

ಬಪರ್ ವಲಯ; ಉಪಸಮಿತಿ ರಚನೆ: ‘ಹುಲಿ ಯೋಜನೆಯ ಬಫರ್ ವಲಯ ವಿಚಾರಕ್ಕೆ ಸಂಬಂಧಿಸಿದಂತೆ ಸಂಪುಟ ಉಪಸಮಿತಿ ರಚಿಸಲಾಗಿದೆ. ಸಾಧಕ–ಬಾಧಕಗಳ ಕುರಿತು ಚರ್ಚಿಸಿ ಸಮಿತಿ ನಿರ್ಣಯ ಕೈಗೊಳ್ಳಲಿದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಜಿ.ಸಿ. ಮಾಧುಸ್ವಾಮಿ ಪ್ರತಿಕ್ರಿಯಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದೇ 12ರಂದು ಉಪಸಮಿತಿ ರಚನೆಯಾಗಿದೆ. ಅರಣ್ಯ ಸಚಿವ, ಸಂಸದೀಯ ವ್ಯವಹಾರ ಸಚಿವ, ಇತರ ಐವರು ಸಚಿವರು ಸಮಿತಿಯಲ್ಲಿದ್ದಾರೆ’ ಎಂದು ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.