ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ
Last Updated 30 ಜೂನ್ 2022, 4:40 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ರಾಜಸ್ಥಾನದಲ್ಲಿ ಟೈಲರ್ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಬಿಜೆಪಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸೇರಿದ ಪ್ರತಿಭಟನಕಾರರು, ರಾಜಸ್ಥಾನದಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪಕ್ಷದ ಜಿಲ್ಲಾಘಟಕದ ಅಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ಮಾತನಾಡಿ, ರಾಜಸ್ಥಾನದಲ್ಲಿ ಟೈಲರ್ ಕನ್ಹಯ್ಯ ಲಾಲ್ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯನ್ನು ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್‌ಲೋಡ್ ಮಾಡಿ ವಿಕೃತಿ ಮೆರೆಯಲಾಗಿದೆ. ಹತ್ಯೆ ಆರೋಪಿಗಳನ್ನು ಶೀಘ್ರ ಬಂಧಿಸಬೇಕು. ತಪ್ಪಿತಸ್ಥರನ್ನು ಗಲ್ಲಿಗೇರಿಸಲು ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

‘ದೇಶದಲ್ಲಿ ಹಿಂದೂ ಯುವಕರ ಹತ್ಯೆಯಾದರೆ ಕಾಂಗ್ರೆಸ್ ತುಟಿ ಬಿಚ್ಚಲ್ಲ. ಕಾಂಗ್ರೆಸ್ ಬೆಂಬಲಿತ ಬುದ್ಧಿ ಜೀವಿಗಳು ದೇಶಕ್ಕೆ ಮಾರಕವಾಗಿದ್ದಾರೆ. ಭಾವೈಕ್ಯ ಮನೋಭಾವದಿಂದ ಇರುವವರಿಗೆ ಸಹಿಷ್ಣುತೆ ಪಾಠ ಹೇಳುತ್ತಾರೆ, ಕ್ರೂರತೆ, ಮತಾಂಧತೆ ಬೆಳೆಸಿಕೊಂಡವರಿಗೆ ಏನೂ ಹೇಳುವುದಿಲ್ಲ’ ಎಂದು ಆರೋಪಿಸಿದರು.

ಪಕ್ಷದ ಜಿಲ್ಲಾಘಟಕದ ಪ್ರಧಾನ ಕಾರ್ಯದರ್ಶಿ ರವಿಂದ್ರ ಬೆಳವಾಡಿ ಮಾತನಾಡಿ, ‘ರಾಜಸ್ಥಾನದಲ್ಲಿ ಕನ್ಹಯ್ಯಲಾಲ್ ಅವರು ಟೈಲರ್ ವೃತ್ತಿ ನಡೆಸುತ್ತಿದ್ದರು. ನೂಪರ್‌ ಶರ್ಮಾ ಅವರ ಭಾವಚಿತ್ರವನ್ನು ವಾಟ್ಸಾಪ್‌ಗೆ ಹಾಕಿಕೊಂಡಿದ್ದರು. ಅದನ್ನು ವಿರೋಧಿಸಿ ಕೆಲ ದಿನಗಳಿಂದ ಅವರಿಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿದ್ದವು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೂ ಅವರು ಕ್ರಮ ಜರುಗಿಸಿಲ್ಲ. ರಾಜಸ್ಥಾನ ಸರ್ಕಾರದ ನಿರ್ಲಕ್ಷದಿಂದಾಗಿ ಹತ್ಯೆ ನಡೆದಿದೆ’ ಎಂದು ದೂರಿದರು.

‘ಕನ್ಹಯ್ಯಲಾಲ್ ಅವರ ಅಂಗಡಿಗೆ ಇಬ್ಬರು ವ್ಯಾಪಾರಿಗಳಂತೆ ಬಂದು, ಹತ್ಯೆ ಮಾಡಿದ್ದಾರೆ. ಹತ್ಯೆ ನಂತರ ಮಾರಾಕಾಸ್ತ್ರ ತೋರಿಸಿ, ಪ್ರಧಾನಿ ಮೋದಿ ಹಾಗೂ ಒಂದು ಧರ್ಮದ ಯುವಕರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೋ ಹರಿಬಿಟ್ಟಿದ್ದಾರೆ. ಅದನ್ನು ಸಹಿಸಲು ಸಾಧ್ಯವಿಲ್ಲ. ರಾಷ್ಟ್ರಪತಿ ಅವರು ರಾಜಸ್ಥಾನದ ಸರ್ಕಾರ ವಜಾಗೊಳಿಸಬೇಕು’ ಎಂದು ಆಗ್ರಹಿಸಿದರು.

ಪಕ್ಷದ ಮುಖಂಡರಾದ ಸಿ.ಆರ್.ಪ್ರೇಮ್‌ಕುಮಾರ್, ಬಿ.ಜಿ.ಸೋಮಶೇಖರಪ್ಪ, ದಿನೇಶ್, ವೆಂಕಟೇಶ್, ಜಸಂತಾಅನಿಲ್‌ಕುಮಾರ್, ಪುಷ್ಪಾರಾಜೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT