ಕೊಪ್ಪ: ‘ಕಳೆದ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಜೀವರಾಜ್ ಅಡ್ಡಿಪಡಿಸುತ್ತಿದ್ದಾರೆ ಎಂದು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದ ಶಾಸಕ ರಾಜೇಗೌಡ ಅವರಿಗೆ ಈಗ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲು ಯಾರ ಅಡ್ಡಿಯಾಗಿದೆ’ ಎಂದು ಮಾಜಿ ಶಾಸಕ ಡಿ.ಎನ್.ಜೀವರಾಜ್ ಪ್ರಶ್ನಿಸಿದರು.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಾಗೂ ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸಿ, ಹರಂದೂರು ಗ್ರಾಮ ಪಂಚಾಯಿತಿ ಎದುರು ಸೋಮವಾರ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ‘ಅವರದೇ ಪಕ್ಷದ ಸರ್ಕಾರ ಇದ್ದರೂ ಜನರ ಬೇಡಿಕೆಗೆ ಸ್ಪಂದಿಸುತ್ತಿಲ್ಲ, ಹಕ್ಕುಪತ್ರ ವಿತರಣೆ ಮಾಡುತ್ತಿಲ್ಲ. ನನ್ನ ಅವಧಿಯಲ್ಲಿ ವಿತರಿಸಿದ ಹಕ್ಕುಪತ್ರಗಳಿಗೆ ಪಹಣಿ ಹಾಕಿ ಕೊಟ್ಟಿಲ್ಲ’ ಎಂದರು.

'ನಾನು ಶಾಸಕನಾಗಿದ್ದ ವೇಳೆಯಲ್ಲಿ ಇಲ್ಲಿನ ನಿವೇಶನ ರಹಿತರಿಗೆ ನಿವೇಶನಗಳನ್ನು ನೀಡುವ ಸಲುವಾಗಿ 11 ಎಕರೆ ಜಾಗ ಕಾಯ್ದಿರಿಸಲಾಗಿತ್ತು. ಕಳೆದ ಬಾರಿ 6.20 ಎಕರೆ ಜಾಗದಲ್ಲಿ ನಿವೇಶನ ರಹಿತರಿಗೆ ಮನೆ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ಆದರೆ ಶಾಸಕರು ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ ಮಾಡಿಲ್ಲ. ಬಡಾವಣೆ ಅಭಿವೃದ್ದಿ ಪಡಿಸಿಲ್ಲ’ ಎಂದರು.

‘ಹರಂದೂರಿನ ನಿವೇಶನ ರಹಿತರಿಗೆ ಆದಷ್ಟು ಬೇಗ ಹಕ್ಕುಪತ್ರ ನೀಡಬೇಕು, ಇಲ್ಲವಾದಲ್ಲಿ ಹಕ್ಕುಪತ್ರ ನೀಡುವವರೆಗೂ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ. ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಲೂಟಿ ಮಾಡುತ್ತಿದೆ. ಮಹಿಳೆಯರಿಗೆ ₹2,000 ಕೊಟ್ಟು, ಪುರುಷರಿಂದ ಎರಡುಪಟ್ಟು ವಸೂಲಿ ಮಾಡುತ್ತಿದೆ’ ಎಂದು ಆರೋಪಿಸಿದರು.

‘ಕೇಂದ್ರ ಸರ್ಕಾರ ಮನೆ ಮನೆಗೆ ಕುಡಿಯುವ ನೀರು ಪೂರೈಕೆ ಮಾಡಲು ಜೆ.ಜೆ.ಎಂ ಯೋಜನೆ ಜಾರಿಗೆ ತಂದಿದೆ. ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಮಾತ್ರ ಮನೆ ಮನೆಗೆ ನೀರು ಹೋಗಿಲ್ಲ, ದೊಡ್ಡ ಮನೆ ಕಟ್ಟುವವರ ಮನೆಗೆ ಮಾತ್ರ ಪೈಪ್ನಲ್ಲಿ ಹಣ ಹೋಗಿದೆ. ಜೆಜೆಎಂನಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ನ ಎಚ್.ಎಂ.ಸತೀಶ್ ಅವರೇ ಹೇಳಿದ್ದಾರೆ’ ಎಂದರು.

ಬಿಜೆಪಿ ಮುಖಂಡ ಎಸ್.ಎಸ್.ರಾಮಸ್ವಾಮಿ ಮಾತನಾಡಿ, ‘ರಾಜ್ಯ ಸರ್ಕಾರ ಪಂಚಾಯಿತಿ ವ್ಯವಸ್ಥೆಯ ಕತ್ತು ಹಿಸುಕುವ ಪ್ರಯತ್ನ ಮಾಡುತ್ತಿದೆ. ಇ-ಸ್ವತ್ತುಗಳನ್ನು ಪಂಚಾಯಿತಿ ನೀಡುತ್ತಿರುವ ಅಧಿಕಾರವನ್ನು ರಾಜ್ಯ ಸರ್ಕಾರ ತೆಗೆಯಲು ಮುಂದಾಗಿದೆ. ಅನುದಾನ ಕೂಡ ನೀಡುತ್ತಿಲ್ಲ. ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆ ಸಹ ನಡೆಸುತ್ತಿಲ್ಲ’ ಎಂದು ಟೀಕಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಕೆ.ದಿನೇಶ್ ಹೊಸೂರು ಮಾತನಾಡಿ, ಸರ್ಕಾರದಿಂದ ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಒಂದೇ ಒಂದು ಆಶ್ರಯ ಮನೆ ಮಂಜೂರಾಗಿಲ್ಲ. ನಿವೇಶನ ರಹಿತರಿಗೆ ಇದರಿಂದ ಸಮಸ್ಯೆಯಾಗುತ್ತಿದೆ. ಕೊಪ್ಪದಲ್ಲಿಯೂ ಹಕ್ಕುಪತ್ರ, ಸಾಗುವಳಿ ಚೀಟಿ ವಿತರಣೆಯಾಗುತ್ತಿಲ್ಲ, ಜನರು, ರೈತರಿಗೆ ಇದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದರು.

ಬಿಜೆಪಿ ವಕ್ತಾರ ಎಚ್.ಆರ್.ಜಗದೀಶ್ ಮಾತನಾಡಿ, ವಸತಿ ಶಾಲೆಯಲ್ಲಿ ಇತ್ತೀಚೆಗೆ ಮೃತಪಟ್ಟ ಬಾಲಕಿ ಸಾವಿನ ತನಿಖೆ ಏನಾಗಿದೆ ಎಂದು ಶಾಸಕರು ತಿಳಿಸಬೇಕು. ಜೀವರಾಜ್ ಅವಧಿಯಲ್ಲಿ 2,500 ಹಕ್ಕುಪತ್ರ ವಿತರಿಸಿದ ನಂತರ ಒಂದೇ ಒಂದು ಹಕ್ಕುಪತ್ರ ಕೊಟ್ಟಿಲ್ಲ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ದಿವ್ಯಾ ದಿನೇಶ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಪದ್ಮಾವತಿ ರಮೇಶ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಿ.ಎಸ್.ಮಹಾಬಲ್ ರಾವ್, ಪ್ರಧಾನ ಕಾರ್ಯದರ್ಶಿ ಜೆ.ಪುಣ್ಯಪಾಲ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಜಯಂತಿ, ಹರೀಶ್ ಚಿಕ್ಕನಗುಂಡಿ, ಶಾಂತಿ, ಶ್ರೀನಿವಾಸ್, ಪಕ್ಷದ ಮುಖಂಡರಾದ ಅನುಸೂಯಾ ಕೃಷ್ಣಮೂರ್ತಿ, ಲಲಿತ, ಜಯಂತ್, ಭಿಷೇಜ ಭಟ್ ಮತ್ತಿತರರು ಇದ್ದರು.

‘ವಿದ್ಯಾರ್ಥಿನಿಯರ ಸಾವಿನ ತನಿಖೆ ನಡೆಸಲಿ’:

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಪ್ರಕರಣಗಳ ತನಿಖೆ ಮಾಡಿಸಲು ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದೆ. ಇದೇ ರೀತಿ ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರ ಸಾವಿನ ಬಗ್ಗೆಯೂ ತನಿಖೆ ನಡೆಸಲಿ ಎಂದು ಜೀವರಾಜ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.