ಶನಿವಾರ, ಮಾರ್ಚ್ 25, 2023
22 °C

ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಎಸ್ ಸಿ ಮೋರ್ಚಾ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಕೆಲವು ದಲಿತ ನಾಯಕರು ಹೊಟ್ಟೆಪಾಡಿಗೆ ಬಿಜೆಪಿ ಸೇರಿದ್ದಾರೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮೂದಲಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಎಸ್ ಸಿ ಮೋರ್ಚಾ ಜಿಲ್ಲಾ ಘಟಕದವರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಸಿದ್ದರಾಮಯ್ಯ ದಲಿತರಿಗೆ ಅಪಮಾನ ಮಾಡಿದ್ದಾರೆ ಎಂದು ದೂರಿದರು.ಮುಖಂಡರಾದ ದೀಪಕ್ ದೊಡ್ಡಯ್ಯ,

ಈಶ್ವರಹಳ್ಳಿ ಮಹೇಶ್, ಪುಷ್ಪರಾಜ್, ಸುಧೀರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು