ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಮೋಜಣಿದಾರ

ಚಿಕ್ಕಮಗಳೂರು: ಅಜ್ಜಂಪುರ ತಾಲ್ಲೂಕಿನ ಸರ್ವೆಯರ್ ರವಿಕುಮಾರ್ ಅವರು ಜಮೀನು ಮೋಜಣಿ (ಸರ್ವೆ) ಕಾರ್ಯಕ್ಕೆ ₹ 3 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಶುಕ್ರವಾರ ಸಿಕ್ಕಿಬಿದ್ದಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್, ಇನ್‌ಸ್ಪೆಕ್ಟರ್ ಸಚಿನ್ ಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಅಜ್ಜಂಪುರದ ನಾಡಕಚೇರಿಯಲ್ಲಿ ರವಿಕುಮಾರ್ ಅವರು ಲಂಚ ಪಡೆಯುವಾಗ ವಶಕ್ಕೆ ಪಡೆದಿದ್ದಾರೆ.
ಜಮೀನು ಮೋಜಣಿಗೆ ಅರ್ಜಿ ಸಲ್ಲಿಸಿದ್ದು, ಮೋಜಣಿ ಕಾರ್ಯಕ್ಕೆ ರವಿಕುಮಾರ್ ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಬೇಗೂರು ಗ್ರಾಮದ ನಾಗರಾಜ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.