ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ ತರಹದ ಹೇಳಿಕೆ ಯಾರೂ ಕೊಡಬಾರದು: ಬಿಎಸ್‌ವೈ

Last Updated 16 ಮಾರ್ಚ್ 2023, 12:40 IST
ಅಕ್ಷರ ಗಾತ್ರ

ಮೂಡಿಗೆರೆ (ಚಿಕ್ಕಮಗಳೂರು): ‘ಆ ತರಹದ ಹೇಳಿಕೆಗಳನ್ನು ಯಾರೂ ಕೊಡಬಾರದು, ಅಂಥ ಹೇಳಿಕೆ ನೀಡಿದ್ದರೆ ಸಿ.ಟಿ.ರವಿ ಅವರನ್ನು ಕರೆದು ಮಾತನಾಡುತ್ತೇನೆ’ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಪ್ರತಿಕ್ರಿಯಿಸಿದರು.

‘ಲಿಂಗಾಯತರಿಗೆ ಪ್ರಾಮುಖ್ಯತೆ ಕೊಡಬೇಕಿಲ್ಲ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ ಎನ್ನಲಾದ ಹೇಳಿಕೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಎಲ್ಲ ಜನರ ಬೆಂಬಲದಿಂದಲೇ ಅಧಿಕಾರ ಹಿಡಿಯಲು ಸಾಧ್ಯ. ಇಂಥ ಮಾತುಗಳೂ ಯಾರಿಂದಲೂ ಬರಬಾರದು’ ಎಂದರು.

‘ಟಿಕೆಟ್‌: ನಾಯಕರು ತೀರ್ಮಾನಿಸುವರು’

‘ಮೂಡಿಗೆರೆ ಕ್ಷೇತ್ರದ ಟಿಕೆಟ್‌ ಗೊಂದಲದ ವಿಚಾರವನ್ನು ಹೆದರಿಸುತ್ತೇವೆ. ಗೆಲ್ಲುವಂಥ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚು ಇರುವುದು ಸ್ವಾಭಾವಿಕ. ಯಾರಿಗೆ ಟಿಕೆಟ್‌ ನೀಡಬೇಕು ಎಂದು ಕೇಂದ್ರದ ನಾಯಕರು ತೀರ್ಮಾನಿಸುತ್ತಾರೆ’ ಎಂದು ಉತ್ತರಿಸಿದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT