ಗುರುವಾರ , ಅಕ್ಟೋಬರ್ 29, 2020
20 °C
ಮಲೆನಾಡು ರೈತ ಹಿತರಕ್ಷಣಾ ಸಮಿತಿ ಕರೆನೀಡಿದ್ದ ಸ್ವಯಂಪ್ರೇರಿತ ಬಂದ್‌ ಯಶಸ್ವಿ– ಬೃಹತ್ ಪ್ರತಿಭಟನಾ ಜಾಥಾ

ನರಸಿಂಹರಾಜಪುರ ತಾಲ್ಲೂಕು ಸಂಪೂರ್ಣ ಸ್ತಬ್ಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನರಸಿಂಹರಾಜಪುರ: ಭದ್ರಾಹುಲಿ ಯೋಜನೆ, ಬಫರ್ ಝೋನ್, ಪರಿಸರ ಸೂಕ್ಷ್ಮ ವಲಯ, ಮೀಸಲು ಅರಣ್ಯ ಪ್ರಸ್ತಾವನೆ, ಕಸ್ತೂರಿರಂಗನ್ ವರದಿ ವಿರುದ್ಧ ಹಾಗೂ ಪಾರಂಪರಿಕ ಅರಣ್ಯ ನಿವಾಸಿಗಳ ಹಕ್ಕೋತ್ತಾಯಿಸಿ ಮಲೆನಾಡು ರೈತ ಹಿತರಕ್ಷಣಾ ಸಮಿತಿ ಕರೆ ನೀಡಲಾಗಿದ್ದ ಸ್ವಯಂ ಪ್ರೇರಿತ ನರಸಿಂಹರಾಜಪುರ ತಾಲ್ಲೂಕು ಬಂದ್ ಸಂಪೂರ್ಣ ಯಶಸ್ವಿಯಾಯಿತು.

ಪಟ್ಟಣದಾದ್ಯಂತ ಗುರುವಾರ ಬೆಳಿಗ್ಗೆಯಿಂದಲೇ ಅಂಗಡಿ, ಮುಂಗಟ್ಟುಗಳು, ಹೋಟೆಲ್‌ಗಳು ಸಂಪೂರ್ಣ ಬಾಗಿಲು ಮುಚ್ಚಿದ್ದವು. ಆಟೊ ಸಂಚಾರ ಸ್ಥಗಿತಗೊಳಿಸಲಾಗಿತ್ತು. ವಾಹನ ಸಂಚಾರ ವಿರಳವಾಗಿತ್ತು.

ಮೆಡಿಕಲ್ ಷಾಪ್, ಆಸ್ಪತ್ರೆ, ಸರ್ಕಾರಿ ಕಚೇರಿಗಳು ಮಾತ್ರ ಬಾಗಿಲು ತೆಗೆದಿದ್ದವು. ಬಂದ್‌ಗೆ ಎಲ್ಲಾ ಪಕ್ಷದವರು, ವಿವಿಧ ಸಂಘಸಂಸ್ಥೆಗಳು ಬೆಂಬಲವನ್ನು ಸೂಚಿಸಿದ್ದವು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ರೈತರು, ನಾಗರಿಕರು ಪಟ್ಟಣದ ಬಸ್ ನಿಲ್ದಾಣದಿಂದ ತಾಲ್ಲೂಕು ಕಚೇರಿವರೆಗೂ ಬೃಹತ್ ಪ್ರತಿಭಟನಾ ಜಾಥಾ ನಡೆಸಿದರು.

‘ನಮ್ಮ ಭೂಮಿ ನಮ್ಮ ಹಕ್ಕು, ಪ್ರಾಣ ಬಿಟ್ಟರೂ ಭೂಮಿ ಬಿಡುವುದಿಲ್ಲ. ಜನವಿರೋಧಿ ಯೋಜನೆ ಕೈ ಬಿಡಬೇಕು’ ಎಂದು ಘೋಷಣೆ ಕೂಗಿದರು. ನಂತರ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.