ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪ | ನರೇಗಾ ಸೌಲಭ್ಯಗಳ ಬಗ್ಗೆ ಮಾಹಿತಿ: ಅಭಿಯಾನ

Published 4 ಮೇ 2024, 13:59 IST
Last Updated 4 ಮೇ 2024, 13:59 IST
ಅಕ್ಷರ ಗಾತ್ರ

ಕೊಪ್ಪ: ತಾಲ್ಲೂಕಿನ ನಿಲುವಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ನಿರಂತರ ಕೆಲಸ ಒದಗಿಸುವ ನಿಟ್ಟಿನಲ್ಲಿ ‘ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತರಿ’ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಾರು ಗ್ರಾಮದಲ್ಲಿ ಮನೆಗಳಿಗೆ ಭೇಟಿ ನೀಡಿ ಕರಪತ್ರ ಹಂಚಲಾಯಿತು. ನರೇಗಾ ಯೋಜನೆಯಲ್ಲಿ ಹೆಚ್ಚಿಸಿರುವ ಕೂಲಿ ಮೊತ್ತ, ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ, ಸಹಾಯವಾಣಿ ಸಂಖ್ಯೆ ನೀಡಲಾಯಿತು.

ರೋಜ್ಗಾರ್ ಸಹಾಯಕಿ ಜ್ಯೋತಿ, ಕರ ವಸೂಲಿಗಾರ ಮಹೇಶ್, ಐಇಸಿ ಸಂಯೋಜಕಿ ಸುಮಲತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT