ಚಿಕ್ಕಮಗಳೂರು: ಪರಿಶಿಷ್ಟ ಜಾತಿಗಳ 101 ಸಮುದಾಯಗಳ ಜನಸಂಖ್ಯೆ ಸಮೀಕ್ಷೆ ನಡೆಸುತ್ತಿರುವ ಗಣತಿದಾರರಿಗೆ ಉಪಜಾತಿ ‘ಗೊತ್ತಿಲ್ಲ’ ಎಂಬ ಉತ್ತರಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿವೆ.

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಬೇಕೆಂದರೆ ಆಯಾ ಸಮುದಾಯಗಳ ಜನಸಂಖ್ಯೆ ಎಷ್ಟಿದೆ ಎಂಬುದು ಗೊತ್ತಾಗಬೇಕಿದೆ. ಇದಕ್ಕಾಗಿ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ನೇತೃತ್ವದ ಆಯೋಗ ಸಮೀಕ್ಷೆ ನಡೆಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 1,230 ಮತಗಟ್ಟೆಗಳಿದ್ದು, ಮೇ 5ರಿಂದಲೇ ಗಣತಿ ಆರಂಭವಾಗಿದೆ. 1,518 ಗಣತಿದಾರರು ಸಮೀಕ್ಷೆ ಕಾರ್ಯದಲ್ಲಿ ನಿರತರಾಗಿದ್ದಾರೆ.

ಗಣತಿಗೆ ಹೋದವರಿಗೆ ಹಲವರು ತಮ್ಮ ಉಪಜಾತಿ ಗೊತ್ತಿಲ್ಲ ಎಂದು ಹೇಳುತ್ತಿದ್ದಾರೆ. ಪರಿಶಿಷ್ಟ ಜಾತಿ ಅಥವಾ ಆದಿ ಕರ್ನಾಟಕ ಎಂದು ಹೇಳುತ್ತಿದ್ದಾರೆ. ಉಪಜಾತಿಯ ಹೆಸರು ಕೇಳಿದರೆ ಗೊತ್ತಿಲ್ಲ ಎಂಬ ಉತ್ತರಗಳು ಬರುತ್ತಿವೆ. ಆ್ಯಪ್ನಲ್ಲಿ ‘ಗೊತ್ತಿಲ್ಲ’ ಎಂದೇ ನಮೂದಿಸಲಾಗುತ್ತಿದೆ ಎಂದು ಗಣತಿದಾರರೊಬ್ಬರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

101 ಉಪಜಾತಿಗಳ ಜನಸಂಖ್ಯೆ ಎಷ್ಟಿದೆ ಎಂಬುದನ್ನು ಅರಿಯಲು ಸಮೀಕ್ಷೆ ನಡೆಸಲಾಗುತ್ತಿದೆ. ಮಲೆನಾಡು ಭಾಗದಲ್ಲಿ ಹೆಚ್ಚಿನವರು ಗೊತ್ತಿಲ್ಲ ಎಂದು ಬರೆಸುತ್ತಿದ್ದಾರೆ. ಹೀಗಾದರೆ ಸಮೀಕ್ಷೆಯ ಉದ್ದೇಶವೇ ಸಾರ್ಥಕವಾಗುವುದಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಈ ಕುರಿತು ಜಾಗೃತಿ ಮೂಡಿಸಿ ಬಳಿಕ ಸಮೀಕ್ಷೆ ನಡೆಸಬೇಕಿತ್ತು ಎಂದು ಅವರು ಅಭಿಪ್ರಾಯ.

ಇನ್ನು ನಗರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುವವರು ಜಾತಿ ಸಮೀಕ್ಷೆಯಿಂದ ಹೊರಗುಳಿಯುವ ಸಾಧ್ಯತೆ ಇದೆ. ಪರಿಶಿಷ್ಟ ಜಾತಿ ಎಂದು ಗೊತ್ತಾದರೆ ಅಕ್ಕ–ಪಕ್ಕದವರು ಕೀಳಾಗಿ ಕಾಣಬಹುದು ಎಂಬ ಕಾರಣಕ್ಕೆ ಮುಚ್ಚಿಡುವ ಸಾಧ್ಯತೆ ಇದೆ. ಇದರಿಂದಲೂ ಜಾತಿ ಸಮೀಕ್ಷೆಯ ಉದ್ದೇಶ ಈಡೇರುವುದಿಲ್ಲ ಎಂದು ಅವರು ಹೇಳುತ್ತಾರೆ.

‘ಉಪಜಾತಿಗಳ ಹೆಸರು ಬರೆಸಲು ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ನಗರ ಪ್ರದೇಶದಲ್ಲಿ ಜಾತಿ ಹೇಳಿಕೊಳ್ಳಲು ಮುಜುಗರವಾದರೆ ಆನ್ಲೈನ್ನಲ್ಲಿ ನೋಂದಣಿ ಮಾಡಲು ಕೊನೆಯಲ್ಲಿ ಅವಕಾಶ ಇದೆ. ಅಲ್ಲಿಯಾದರೂ ನೋಂದಣಿ ಮಾಡಿಸಬೇಕು’ ಎಂದು ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ರಾಜ್ಯ ಸಮಿತಿ ಸದಸ್ಯ ಮರ್ಲೆ ಅಣ್ಣಯ್ಯ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.