ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಟ್ಟಿಗೆಹಾರ | ಹೆದ್ದಾರಿಯಲ್ಲಿ ಜಾನುವಾರುಗಳ ಕಾಟ; ವಾಹನ ಸವಾರರಿಗೆ ಪ್ರಾಣ ಸಂಕಟ

Last Updated 19 ನವೆಂಬರ್ 2022, 5:09 IST
ಅಕ್ಷರ ಗಾತ್ರ

ಕೊಟ್ಟಿಗೆಹಾರ: ಕೊಟ್ಟಿಗೆಹಾರದ ವಿಲ್ಲುಪುರಂ –ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀಡಾಡಿ ಜಾನುವಾರುಗಳ ಕಾಟ ಹೆಚ್ಚಾಗಿದ್ದು, ವಾಹನ ಸವಾರರಿಗೆ ಪ್ರಾಣ ಸಂಕಟವಾಗಿದೆ.

ರಸ್ತೆ ವಿಸ್ತರಣೆಯ ನಂತರವೂ ಬೀಡಾಡಿ ದನಗಳ ಕಾಟ ತಪ್ಪಿಲ್ಲ. ಹಗಲಿನಲ್ಲೂ ರಸ್ತೆಯ ಮಧ್ಯದಲ್ಲಿ ಮಲಗಿರುತ್ತವೆ. ಹಲವು ದನಗಳು ರಸ್ತೆ ಅಪಘಾತಕ್ಕೆ ಬಲಿಯಾಗಿವೆ. ದ್ವಿಚಕ್ರ ಸವಾರರಂತೂ ಹಿಡಿಶಾಪ ಹಾಕಿಯೇ ಸಂಚರಿಸುತ್ತಿದ್ದಾರೆ. ಈ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದರೂ, ಸ್ಥಳೀಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮಕ್ಕೆ ಮುಂದಾಗಿಲ್ಲ.

ಫಲ್ಗುಣಿ, ಬಣಕಲ್, ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆದ್ದಾರಿಯಲ್ಲಿ ಜಾನುವಾರುಗಳ ಸಮಸ್ಯೆ ಹೆಚ್ಚಾಗುತ್ತಿದ್ದು, ಆಯಾ ಗ್ರಾಮ ಪಂಚಾಯಿತಿಯಲ್ಲಿ ದನಗಳ ಮಾಲಿಕರಿಗೆ ನೋಟಿಸ್ ನೀಡಿ ಎಚ್ಚರಗೊಳಿಸುವ ಕಾರ್ಯ ನಡೆಯಬೇಕು. ದನಗಳ ಕಿವಿಯಲ್ಲಿ ಹಳದಿ ಗುರುತು ಪಟ್ಟಿಯಿದ್ದು, ಮಾಲೀಕರ ಗುರುತನ್ನು ಪತ್ತೆ ಹಚ್ಚಬಹುದಾಗಿದೆ ಎನ್ನುತ್ತಾರೆ ಕನ್ನಡ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಹೊರಟ್ಟಿ ರಘು.

ದನಗಳು ರಸ್ತೆಯಲ್ಲೇ ಮಲಗುತ್ತಿದ್ದು, ವಾಹನ ಅಪಘಾತಕ್ಕೆ ಬಲಿಯಾಗುತ್ತಿವೆ. ದನಗಳ ಮಾಲೀಕರು ಸಹಕರಿಸಬೇಕು ಎನ್ನುತ್ತಾರೆ ಗ್ರಾಮಸ್ಥ ಅಬ್ದುಲ್ ರೆಹಮಾನ್ ಅಲಿಯಾಸ್ ಕುಂಞಮೋಣು.

ಬೀಡಾಡಿ ದನಗಳು ರಸ್ತೆಯಲ್ಲಿ ಮಲಗಿ ವಾಹನ ಸವಾರರಿಗೆ ಕಾಟ ಕೊಡುವ ಬಗ್ಗೆ ಗಮನಕ್ಕೆ ಬಂದಿದ್ದು, ನಿಗಾ ವಹಿಸದ ದನಗಳನ್ನು ಗೋವು ಶಾಲೆಗಳಿಗೆ ಅಟ್ಟಲು ಕ್ರಮ ಕೈಗೊಳ್ಳಲಾಗಿತ್ತು. ದನಗಳನ್ನು ವಾಹನಕ್ಕೆ ತುಂಬುವಾಗ ಮಾಲೀಕರು ನಮ್ಮ ದನಗಳು ಎಂದು ಬಿಡಿಸಿಕೊಂಡು ಹೋಗುತ್ತಾರೆ. ನಂತರ ನಿಗಾ ವಹಿಸುವುದಿಲ್ಲ. ದನದ ಮಾಲೀಕರು ಸಹಕಾರ ನೀಡಿದರೆ ಸಮಸ್ಯೆ ಬಗೆ ಹರಿಯುತ್ತದೆ. ದನಗಳ ಮಾಲೀಕರಿಗೆ ಖಡಕ್ ಸೂಚನೆ ನೀಡಲಾಗುವುದು ಎಂದು ತರುವೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಂ.ಸತೀಶ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT