ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐ ಪ್ರಕರಣ ವಾಪಸ್‌: ಡಿ.ಕೆ.ಶಿವಕುಮಾರ್ ಋಣ ತೀರಿಸುವ ಯತ್ನ ಎಂದ ಕಲ್ಮರುಡಪ್ಪ

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಸಿ. ಕಲ್ಮರುಡಪ್ಪ ಟೀಕೆ
Published 25 ನವೆಂಬರ್ 2023, 15:29 IST
Last Updated 25 ನವೆಂಬರ್ 2023, 15:29 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಬಂಧಿತ ಸಿಬಿಐ ಪ್ರಕರಣದ ತನಿಖೆ ಮುಕ್ತಾಯ ಹಂತದಲ್ಲಿರುವಾಗಲೇ ರಾಜ್ಯ ಸರ್ಕಾರ ಪ್ರಕರಣವನ್ನು ವಾಪಸ್ ಪಡೆಯಲು ಮುಂದಾಗಿರುವುದು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ಟೀಕಿಸಿದ್ದಾರೆ.

ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಡಿ.ಕೆ.ಶಿವಕುಮಾರ್ ಬಂಡವಾಳ ಸುರಿದಿದ್ದರು. ಈಗ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಿಬಿಐ ತನಿಖೆಯಿಂದ ಪಾರು ಮಾಡಿ ಅದರ ಋಣ ತೀರಿಸಲು ಈ ತೀರ್ಮಾನ ಕೈಗೊಂಡಿದೆ. ಇದು ನಾಚಿಕೆಗೇಡಿನ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2013 ರಿಂದ 2018ರವರ ಅವಧಿಯಲ್ಲಿ ಶಿವಕುಮಾರ್ ಅವರ ಆಸ್ತಿ ಎಷ್ಟಿತ್ತು. ಬಳಿಕ ಎಷ್ಟು ಹೆಚ್ಚಿದೆ ಎಂಬ ಬಗ್ಗೆ ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತ್ತು. ತನಿಖೆ ಮುಕ್ತಾಯದ ಹಂತದಲ್ಲಿರುವಾಗಲೇ ಪ್ರಕರಣವನ್ನು ವಾಪಸ್ ಪಡೆಯಲು ನಿರ್ಣಯ ಕೈಗೊಂಡಿರುವುದು ಸರ್ಕಾರದ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಛೇಡಿಸಿದ್ದಾರೆ.

ಶಿವಕುಮಾರ್ ಪ್ರಾಮಾಣಿಕರಾಗಿದ್ದರೆ ಸಿಬಿಐ ತನಿಖೆಗೆ ಎಲ್ಲ ರೀತಿಯ ಸಹಕಾರವನ್ನು ನೀಡಬೇಕು. ಅದನ್ನು ಬಿಟ್ಟು ತನಿಖೆ ಮುಕ್ತಾಯ ಹಂತದಲ್ಲಿರುವಾಗ ಪ್ರಕರಣ ಹಿಂಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT