ಗುರುವಾರ , ಸೆಪ್ಟೆಂಬರ್ 19, 2019
24 °C

‘ಕೇಂದ್ರ ನಯಾಪೈಸೆ ನೀಡಿಲ್ಲ’

Published:
Updated:
Prajavani

ಮೂಡಿಗೆರೆ: ನೆರೆ ಪರಿಹಾರಕ್ಕಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಪದೇ ಪದೇ ಬೇಡಿಕೊಂಡರೂ ಕೇಂದ್ರ ಸರ್ಕಾರವು ನಯಾಪೈಸೆ ಹಣ ನೀಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದರು.

ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಪ್ರಕೃತಿ ವಿಕೋಪದಿಂದ ರಾಜ್ಯದಲ್ಲಿ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. 20 ಜಿಲ್ಲೆಗಳಲ್ಲಿ ಅಂದಾಜು ₹ 6,000 ಕೋಟಿ ನಷ್ಟ ಉಂಟಾಗಿದ್ದು, ರಾಜ್ಯ ಸರ್ಕಾರಕ್ಕೆ ಅಷ್ಟೊಂದು ಹಣವನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಮಾತ್ರವಲ್ಲ, 25 ಮಂದಿ ಬಿಜೆಪಿ ಸಂಸದರು, ಕೇಂದ್ರ ಸಚಿವರಿದ್ದರೂ ಕೇಂದ್ರದ ಮೇಲೆ ಒತ್ತಡವನ್ನು ತಂದು ಪರಿಹಾರದ ಹಣ ತರುವಲ್ಲಿ ಮುಖ್ಯಮಂತ್ರಿ ಸಂಪೂರ್ಣ ವಿಫಲವಾಗಿದ್ದಾರೆ’ ಎಂದು ದೂರಿದರು.

Post Comments (+)