ಶುಕ್ರವಾರ, ಸೆಪ್ಟೆಂಬರ್ 24, 2021
26 °C

ಚಾರ್ಮಾಡಿ: ದಿನಪೂರ್ತಿ ಲಘು ವಾಹನ ಸಂಚಾರಕ್ಕೆ ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ದಿನದ 24 ಗಂಟೆಯೂ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾರಿ ವಾಹನಗಳ ಸಂಚಾರಕ್ಕೆ ವಿಧಿಸಿರುವ ನಿರ್ಬಂಧ ಮುಂದುವರಿಸಲಾಗಿದೆ.

ಟೆಂಪೊ, ಆಂಬುಲೆನ್ಸ್‌, ಕಾರು, ಜೀಪು, ವ್ಯಾನು, ದ್ವಿಚಕ್ರ ವಾಹನಗಳ ಓಡಾಟಕ್ಕೆ  ಅವಕಾಶ ಕಲ್ಪಿಸಲಾಗಿದೆ. ಈವರೆಗೆ ಲಘುವಾಹನಗಳು ಹಗಲಿನಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ಇತ್ತು.

ಕೆಎಸ್‌ಆರ್‌ಟಿಸಿ ಸಾಮಾನ್ಯ ಬಸ್‌, ಆರು ಚಕ್ರದ ಲಾರಿಗಳು ಹಗಲಿನಲ್ಲಿ (ಬೆಳಿಗ್ಗೆ 6ರಿಂದ ಸಂಜೆ 7 ಗಂಟೆ) ಮಾತ್ರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು