ಗುರುವಾರ , ಅಕ್ಟೋಬರ್ 6, 2022
24 °C
ಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ ಉತ್ತಮ ಮಳೆ

ಚಾರ್ಮಾಡಿ: ಉರುಳಿದ ಮರ, ಕೆಲ ಹೊತ್ತು ವಾಹನ ಸಂಚಾರ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಟ್ಟಿಗೆಹಾರ: ಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಭಾನುವಾರ ಬೆಳಿಗ್ಗೆಯಿಂದ ಸೋಮವಾರ ಬೆಳಿಗ್ಗೆ ತನಕ 14.7 ಸೆಂ.ಮೀ ಮಳೆ ದಾಖಲಾಗಿದೆ.

ಮಳೆಯ ಜತೆ ಗಾಳಿಯು ಬೀಸುತ್ತಿದ್ದು, ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದುದರಿಂದ ರಸ್ತೆ ಸಂಚಾರ ಸ್ಥಗಿತವಾಗಿತ್ತು. ಸ್ಥಳೀಯರು, ಆಂಬುಲೆನ್ಸ್ ಚಾಲಕರು, ಇತರ ವಾಹನ ಚಾಲಕರ ಸಹಾಯದಿಂದ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ರೋಗಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಚಾಲಕರು ಪರದಾಡಿದರು.

ಬಣಕಲ್ ಸಂತೆಯ ಬಳಿ ಮಳೆಗೆ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದು ಆತಂಕ ಸೃಷ್ಟಿಯಾಗಿತ್ತು. ಆದರೆ, ಯಾವುದೇ ಅಪಾಯವಾಗಿಲ್ಲ.

ಚಾರ್ಮಾಡಿ ಘಾಟಿಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಕಾರು ಜಖಂಗೊಂಡಿವೆ. ಬಣಕಲ್ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಂದಕಕ್ಕೆ ಉರುಳಿದ್ದು ಯಾವುದೇ ಆಪಾಯ ಸಂಭವಿಸಿಲ್ಲ. ಇನ್ನು ಹಲವು ತೋಟಗಳಲ್ಲಿ ಮರಗಳು ಉರುಳಿವೆ. ಅತಿಯಾದ ಮಳೆಯಿಂದ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು