ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯಪುರ: 236 ಸೀರೆ ವಶ?

Last Updated 21 ಮಾರ್ಚ್ 2023, 4:33 IST
ಅಕ್ಷರ ಗಾತ್ರ

ಜಯಪುರ(ಬಾಳೆಹೊನ್ನೂರು): ಇಲ್ಲಿಗೆ ಸಮೀಪದ ಹೆಗ್ಗಾರುಕೊಡಿಗೆ ಬಳಿ ರಾಜಕೀಯ ಪಕ್ಷವೊಂದರ ಪ್ರತಿನಿಧಿ ಜನರಿಗೆ ಹಂಚಲು ತಂದಿದ್ದರು ಎನ್ನಲಾದ 236 ಸೀರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರಿಗೆ ಹಂಚಲು ಸೀರೆ ತರಲಾಗಿತ್ತು ಎಂಬ ಆರೋಪದ ಮೇಲೆ ಪೊಲೀಸರು (ಎನ್.ಸಿ) ಸಂಜ್ಞಾರಹಿತ ಅಪರಾಧ ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸೀರೆ ವಶಪಡಿಸಿಕೊಂಡ ಬಗ್ಗೆ ಜಯಪುರ ಪೊಲೀಸರು ಮಾಹಿತಿ ನೀಡಲು ಹಿಂದೇಟು ಹಾಕಿದರು. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಸಂಪರ್ಕಿಸಿದರೂ, ಅವರು ಕರೆ ಸ್ವೀಕರಿಸಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT