ಅಜ್ಜಂಪುರ: ಪತ್ರಕರ್ತರ ಭವನಕ್ಕೆ ಶೋಭಾ ಭೂಮಿಪೂಜೆ

ಅಜ್ಜಂಪುರ: ಪಟ್ಟಣದಲ್ಲಿ ತಾಲ್ಲೂಕು ಪತ್ರಕರ್ತರ ಭವನ ನಿರ್ಮಾಣ ಕಾಮಗಾರಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೂಮಿಪೂಜೆ ನೆರವೇರಿಸಿದರು.
ಶಾಸಕ ಡಿ.ಎಸ್. ಸುರೇಶ್, ಆಧುನಿಕ ವ್ಯವಸ್ಥೆಯಲ್ಲಿ ಸುದ್ದಿ-ಸಮಾಚಾರಗಳನ್ನು ವೇಗವಾಗಿ ತಲುಪಿಸುವ ಹೊಣೆಗಾರಿಕೆ ಪತ್ರಕರ್ತರ ಮೇಲಿದೆ. ಪತ್ರಕರ್ತರು ಒಂದೆಡೆ ಕುಳಿತು ಕೆಲಸ ನಿರ್ವಹಿಸಲು ಅಗತ್ಯವಿರುವ ಭವನ ನಿರ್ಮಾಣಕ್ಕೆ ಅನು ದಾನ ನೀಡಲಾಗುವುದು ಎಂದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಎಂ.ರಾಜಶೇಖರ್, ₹ 95 ಲಕ್ಷ ವೆಚ್ಚದಲ್ಲಿ ಪತ್ರಿಕಾ ಭವನ ನಿರ್ಮಿಸಲು ಪತ್ರಕರ್ತರ ಸಂಘ ನಿರ್ಧರಿಸಿದೆ ಎಂದರು.
ಇದೇ ವೇಳೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಂಜು ಎಂ. ಹೊಸಹಳ್ಳಿ ಭವನ ನಿರ್ಮಾಣಕ್ಕೆ ಅನುದಾನ ನೀಡುವಂತೆ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಶಾಸಕ ಡಿ.ಎಸ್. ಸುರೇಶ್ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗರತ್ನಾ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಆರ್.ಆನಂದಪ್ಪ, ಪಂಚಾಯಿತಿ ಮಾಜಿ ಅಧ್ಯಕ್ಷೆ ಅನ್ನಪೂರ್ಣಮ್ಮ, ಕಾಂಗ್ರೆಸ್ ಕಿಸಾನ್ ಸೆಲ್ ಅಧ್ಯಕ್ಷೆ ಸಿದ್ದೇಗೌಡ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.