ಸೋಮವಾರ, ಡಿಸೆಂಬರ್ 5, 2022
18 °C

ಬ್ರಾಹ್ಮಣ ಸಮುದಾಯದ ಅವಹೇಳನ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪ: ‘ಮೈಸೂರಿನಲ್ಲಿ ಬ್ರಾಹ್ಮಣ ಸಮುದಾಯವನ್ನು ಟೀಕಿಸಿರುವ ಮಲ್ಲೇಶ ಎಂಬ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ತಾಲ್ಲೂಕು ಬ್ರಾಹ್ಮಣ ಮಹಾಸಭಾ ವತಿಯಿಂದ ಕೆಸುಕೊಡಿಗೆ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಶನಿವಾರ ಶಿರಸ್ತೆದಾರ್ ರಶ್ಮಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

‘ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರ ಬೆಂಬಲಿಗರು ಎಂದು ಗುರುತಿಸಿಕೊಂಡಿರುವ ಮಲ್ಲೇಶ ಅವರು ‘ಬ್ರಾಹ್ಮಣ ಮತ್ತು ಬ್ರಾಹ್ಮಣ್ಯವನ್ನು’ ಯಾರೊಬ್ಬರೂ ನಂಬಬಾರದು ಎಂದು ಹೇಳಿ ಸಮುದಾಯಕ್ಕೆ ಧಕ್ಕೆ ತಂದಿದ್ದಾರೆ’ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.

‘ಬ್ರಾಹ್ಮಣ ಸಮುದಾಯವು ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಸರ್ವರ ಹಿತವನ್ನು ಬಯಸುವುದರೊಂದಿಗೆ, ಸರ್ವರೊಂದಿಗೆ ಸಹಬಾಳ್ವೆ ನಡೆಸುತ್ತಾ ಬಂದಿದೆ. ಮಲ್ಲೇಶ ಅವರು ಬ್ರಾಹ್ಮಣರನ್ನು ಹಾಗೂ ಹಿಂದೂ ಸಮಾಜವನ್ನು ಕ್ಷುಲ್ಲಕವಾಗಿ ಟೀಕಿಸಿದ್ದಾರೆ. ಭಾರತದ ಉತ್ಕೃಷ್ಟ ಗ್ರಂಥಗಳಾದ ವೇದ ಮತ್ತು ಉಪನಿಷತ್ ಗಳನ್ನು ಹೀನಾಯವಾಗಿ ಟೀಕಿಸಿ, ಸಮಾಜವನ್ನು ತೇಜೋವಧೆ ಮಾಡಿದ್ದಾರೆ. ಇಂತಹ ವ್ಯಕ್ತಿಗಳಿಂದ ಮಾಜಿ ಮುಖ್ಯಮಂತ್ರಿಗಳು(ಸಿದ್ದರಾಮಯ್ಯ) ದೂರವಿರಬೇಕು’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.