ಚಿಕ್ಕಮಗಳೂರು: ಆಲ್ದೂರು ಸಮೀಪದ ಅರೇನೂರು ಗ್ರಾಮದ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ರವಿ ಅವರಿಗೆ ಚಿಕಿತ್ಸೆ ಸಿಗದೆ ಪರದಾಡಿದ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಇದೊಂದು ಅಮಾನವೀಯ ಘಟನೆ. ವೆನ್ಲಾಕ್ ರೀತಿಯ ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೇ ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಿದರೂ ಚಿಕಿತ್ಸೆ ಸಿಗದಿರುವುದು ನೋವಿನ ಸಂಗತಿ. ಈ ಪ್ರಕರಣದ ಬಗ್ಗೆ ಕೂಲಂಕಷ ಪರಿಶೀಲನೆ ನಡೆಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ವಿಷಯ ತಿಳಿದ ಕೂಡಲೇ ನಿಮ್ಹಾನ್ಸ್ನಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಯಿತು. ಸರ್ಕಾರಿ ಆಸ್ಪತ್ರೆಯಿಂದ ಶಿಫಾರಸು ಮಾಡಿದರೆ ಖಾಸಗಿ ಆಸ್ಪತ್ರೆಯವರು ಚಿಕಿತ್ಸೆ ನೀಡಬೇಕಾಗುತ್ತದೆ. ಆದರೆ, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಏಕೆ ದೊರೆತಿಲ್ಲ ಎಂಬುದು ಗೊತ್ತಾಗಬೇಕಿದೆ. ಅದಕ್ಕಾಗಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದೇನೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.

ಅಪಘಾತದಲ್ಲಿ ಗಾಯಗೊಂಡಿದ್ದ ರವಿ ಅವರಿಗೆ ಬೆಂಗಳೂರಿನ ನಿಮ್ಹಾನ್ಸ್ನಲ್ಲಿ ಗುರುವಾರ ಶಸ್ತಚಿಕಿತ್ಸೆ ನಡೆದಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಶುಕ್ರವಾರ ವಾರ್ಡ್ಗೆ ಸ್ಥಳಾಂತರ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ರವಿ ಕುಟುಂಬದವರು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-51-1629185492

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.