ಆಲ್ದೂರು: ಸಮೀಪದ ಹಳೆಯ ಫಾರೆಸ್ಟ್ ಗೇಟ್ ವೃತ್ತದಿಂದ ವಗರ್ ರಸ್ತೆ ವಾರ್ಡ್ ಮತ್ತು ದೋಣಗುಡಿಗೆ ಕುಂದೂರು ವರೆಗಿನ 13 ಕಿ.ಮೀ ರಸ್ತೆಯ ಡಾಂಬರು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಸಂಚಾರ ದುಸ್ತರವಾಗಿದೆ.

2013- 14ರಲ್ಲಿ ಈ ರಸ್ತೆಯ ಡಾಂಬರೀಕರಣ ಮತ್ತು 2018ರಲ್ಲಿ ಗುಂಡಿಗಳಿಗೆ ತೇಪೆ ಕಾಮಗಾರಿ ನಡೆದಿತ್ತು. ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟಿಪ್ಪರ್ ಲಾರಿಗಳು ಓಡಾಡುವುದರಿಂದ 11 ವರ್ಷಗಳಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಮುಸ್ತಫ ಶಾಸಕಿ ನಯನಾ ಮೋಟಮ್ಮ ಅವರನ್ನು ಆಗ್ರಹಿಸಿದರು.

ಟಿಪ್ಪರ್ ಲಾರಿಗಳ ಓಡಾಟದಿಂದ ದೂಳಿನ ಸಮಸ್ಯೆ ಹೆಚ್ಚಾಗಿದೆ. ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರು ಜೀವ ಭಯದಲ್ಲೇ ವಾಹನ ಚಲಾಯಿಸಬೇಕಾದ ಸ್ಥಿತಿ ಇದೆ. ಮಳೆ ಬಂದಾಗ ರಸ್ತೆಯಲ್ಲೇ ನೀರು ಹರಿಯುತ್ತಿದ್ದು, ರಸ್ತೆ ಕಾಣದಂತಾಗುತ್ತದೆ ಎಂದು ಸ್ಥಳೀಯ ಹರೀಶ್ ತಿಳಿಸಿದರು.

ರಸ್ತೆ ಪಕ್ಕದಲ್ಲಿ ಚರಂಡಿ ಇಲ್ಲದೆ ಬೇಗನೆ ರಸ್ತೆ ಹದಗೆಟ್ಟಿದೆ. ರಸ್ತೆ ಕಾಮಗಾರಿ ನಡೆಸುವುದರ ಜೊತೆಗೆ ಎರಡೂ ಬದಿಯಲ್ಲಿ ಚರಂಡಿ ನಿರ್ಮಿಸಬೇಕು ಎಂದು ದೋಣಗುಡಿಗೆ ರಾಜೇಶ್ ಒತ್ತಾಯಿಸಿದರು.

ಮುಖ್ಯಮಂತ್ರಿಯ ಮೂಲಸೌಕರ್ಯ ವಿಶೇಷ ಅನುದಾನದಿಂದ ಆಲ್ದೂರು ವಗರ್ ರಸ್ತೆಯ ಕುಂದೂರುವರೆಗಿನ 13 ಕಿ.ಮೀ. ಸಂಪರ್ಕ ರಸ್ತೆಗೆ ₹4 ಕೋಟಿ ಅನುದಾನ ಒದಗಿಸಲಾಗಿದ್ದು, ತೀವ್ರವಾಗಿ ಹದಗೆಟ್ಟಿರುವ ರಸ್ತೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಆಗಲಿದೆ. ಕಾವೇರಿ ನೀರಾವರಿ ನಿಗಮದಿಂದ ಸಾರಳ್ಳಿ ಸೇತುವೆ ನಿರ್ಮಿಸಲು ₹2.5 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಶಾಸಕಿ ನಯನಾ ಮೋಟಮ್ಮ ‘ಪ್ರಜಾವಾಣಿ’ಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-126-1655598901

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.