ಚಿಕ್ಕಮಗಳೂರು: ತಾಲ್ಲೂಕಿನ ಹೊಸಕೋಟೆ ಗ್ರಾಮದ ಸರ್ಕಾರಿ ಖಾಲಿ ಜಾಗದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ವೇಳೆ ಕೆಲವರು ಅಡ್ಡಿ ಪಡಿಸಿದ್ದಾರೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಸಂಸ ರಾಜ್ಯ ಸಮಿತಿ ಸದಸ್ಯ ಮರ್ಲೆ ಅಣ್ಣಯ್ಯ ಒತ್ತಾಯಿಸಿದರು.

ಅಂಬೇಡ್ಕರ್ ಭಾವಚಿತ್ರದೊಂದಿಗೆ ಜಯಂತಿ ಆಚರಿಸುತ್ತಿದ್ದಾಗ ಇದೇ ಗ್ರಾಮದ ಮೇಲ್ಜಾತಿಯವರು ಅಡ್ಡ ಬಂದಿದ್ದಾರೆ. ಕೆಲ ಯುವಕರು ಅಂಬೇಡ್ಕರ್ ಭಾವಚಿತ್ರಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚುವಂತೆ ಪ್ರಚೋದಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ದೂರಿದರು.

ಸರ್ಕಾರಿ ಜಾಗದಲ್ಲಿ ಜಯಂತಿ ಆಚರಿಸಲು ಅವಕಾಶ ನೀಡಬಾರದು. ಬಹಿಷ್ಕಾರ ಹಾಕಬೇಕು ಎಂದು ನಿಂದಿಸಿದ್ದಾರೆ. ಭಾವಚಿತ್ರವನ್ನೂ ಹಾನಿ ಮಾಡಿದ್ದಾರೆ ಎಂದರು.

ನೀಲಿ ಬಾವುಟದಲ್ಲಿ ಅಂಬೇಡ್ಕರ್ ಭಾವಚಿತ್ರ ಇದ್ದುದನ್ನು ಕಿತ್ತು ಹಾಕಿದರು. ದೀಪದ ಕಂಬಗಳನ್ನು ಎತ್ತಿ ಬಿಸಾಕಿದರು ಮತ್ತು ಈ ಖಾಲಿ ಸರ್ಕಾರಿ ಜಾಗದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಬೇಡಿ ಎಂದು ಜಾತಿ ನಿಂದನೆ ಮಾಡಿದರು ಎಂದು ದೂರಿದರು.

ಅಂಬೇಡ್ಕರ್ ಜಯಂತಿ ಆಚರಣೆಗೆ ಅಡ್ಡಿಪಡಿಸಿ ಜಾತಿ ನಿಂದನೆ ಮಾಡಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ದಸಂಸ ಮುಖಂಡರಾದ ವೀರಭದ್ರಪ್ಪ, ರೇವಣ್ಣ, ಗಣೇಶ್, ಸಿದ್ದಯ್ಯ, ಆನಂದ, ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-126-614406167

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.