ಚಿಕ್ಕಮಗಳೂರು: ರಾಜ್ಯ ಸರ್ಕಾರ ಬಡವರ ಆರೋಗ್ಯ ಕಾಪಾಡಲು ಗ್ರಾಮೀಣ ಭಾಗದಲ್ಲಿ ಆಸ್ಪತ್ರೆಗಳನ್ನು ಆರಂಭಿಸುವ ಮಹತ್ವದ ಯೋಜನೆ ಕೈಗೊಂಡಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.

ಬಾಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬಾಣೂರು ಶಿವಪುರ ಗ್ರಾಮದಲ್ಲಿ ₹65 ಲಕ್ಷ ವೆಚ್ಚದಲ್ಲಿ ಆಯುಷ್ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ತಲಾ ₹65 ಲಕ್ಷ ವೆಚ್ಚದಲ್ಲಿ 17 ಅಯುಷ್ ಆಸ್ಪತ್ರೆಗಳು ಮಂಜೂರು ಆಗಿವೆ. ಈಗಾಗಲೇ 7 ಆಸ್ಪತ್ರೆಗಳಿಗೆ ನಿವೇಶನ ಗುರುತಿಸಿ ಟೆಂಡರ್ ಕರೆಯಲಾಗಿದೆ. ಇನ್ನು ಉಳಿದ 10 ಆಸ್ಪತ್ರೆಗಳಿಗೆ ಜಾಗ ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದರು.

ಆಸ್ಪತ್ರೆ ಕಟ್ಟಡ ಗುಣಮಟ್ಟದಿಂದ ನಿರ್ಮಾಣವಾಗಬೇಕು. ನಿರ್ಮಾಣದ ಬಳಿಕ ಆಸ್ಪತ್ರೆಗೆ ಆಯುಷ್ ವೈದ್ಯರನ್ನು ನೇಮಕ ಮಾಡಲಾಗುವುದು. ಇದರಿಂದ ಚಿಕ್ಕಬಾಣೂರು, ಗುಬ್ಬಿಹಳ್ಳಿ, ಬ್ರಹ್ಮಸಮುದ್ರ, ಮಂಜೀಹಳ್ಳಿ ಮುಂತಾದ ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಗ್ರಾಮೀಣ ಭಾಗದ ಜನರು ತಮ್ಮ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ಅದೇ ರೀತಿ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಬಯಲು ಭಾಗದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಭೆ ನಡೆದಿದ್ದು, ಅವಶ್ಯಕತೆ ಇರುವ ಕಡೆ ನೀರು ಪೂರೈಕೆಯಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಆಸ್ಪತ್ರೆಗೆ ನಿವೇಶನ ನೀಡಿರುವ ದಾನಿ ವಿಶ್ವನಾಥ್, ಗ್ರಾ.ಪಂ. ಸದಸ್ಯ ಉಮಾಕಾಂತ್, ಮಾಜಿ ಅಧ್ಯಕ್ಷ ಧನಂಜಯ್, ನಟೇಶ್, ಮಲ್ಲಿಕಾರ್ಜುನ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-126-2054532121

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.