ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ಒಟ್ಟು 12 ಆಯುಷ್ ಆಸ್ಪತ್ರೆ ಮಂಜೂರಾಗಿದ್ದು, ಈ ಪೈಕಿ 5 ಕೇಂದ್ರಗಳ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಗುತ್ತಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಇನಾಂ ದತ್ತಾತ್ರೇಯ ಪೀಠ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಲ್ ಗ್ರಾಮದಲ್ಲಿ ತಲಾ ₹65 ಲಕ್ಷ ವೆಚ್ಚದಲ್ಲಿ 5 ಆಯುಷ್ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಬಡವರು ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡಲು ಸರ್ಕಾರ ಮಂಜೂರು ಮಾಡಿರುವ ಆಯುಷ್ ಆಸ್ಪತ್ರೆ ಕಟ್ಟಡಗಳ ಕಾಮಗಾರಿಯನ್ನು ಗುಣಮಟ್ಟದಿಂದ ನಡೆಸಬೇಕು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಆಯುಷ್ ಆಸ್ಪತ್ರೆಗಳ ಕಟ್ಟಡ ಕಾಮಗಾರಿ ಪೂರ್ಣಗೊಂಡ ಬಳಿಕ ಸ್ಥಳೀಯವಾಗಿ ನಾಗರಿಕರ ಆರೋಗ್ಯ ಕಾಪಾಡಲು ಅಗತ್ಯ ಔಷಧಿ, ಮೂಲಸೌಕರ್ಯ ಸೇರಿ ದಾದಿಯರು ಮತ್ತು ವೈದ್ಯರನ್ನು ನೇಮಕ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮಹಲ್ ಗ್ರಾಮದಲ್ಲಿ ಸುಮಾರು ₹50 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ ಶೀಘ್ರ ಆರಂಭವಾಗಲಿವೆ. ಬಡವರ ಬದುಕಿಗೆ ಶ್ರಮಿಸುತ್ತಿರುವ ರಾಜ್ಯ ಸರ್ಕಾರ, ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಐದು ತಿಂಗಳಿನಲ್ಲಿ ಅನುಷ್ಠಾನಕ್ಕೆ ತಂದು ಎಲ್ಲಾ ಸಮುದಾಯದ ಬಡವರ ಬದುಕಿಗೆ ನೆರವಾಗುವ ಮೂಲಕ ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬಣ್ಣಿಸಿದರು.

ಹಿಂದಿನ ಸರ್ಕಾರದಲ್ಲಿ ಮಂಜೂರು ಮಾಡಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುದಾನ ನೀಡಿರಲಿಲ್ಲ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ನೇತೃತ್ವದಲ್ಲಿ ಈಗಾಗಲೇ ₹100 ಕೋಟಿ ಅನುದಾನ ಮಂಜೂರಾಗಿದೆ. ಇನ್ನೊಂದು ವರ್ಷದಲ್ಲಿ ಎಲ್ಲಾ ಮೂಲ ಸೌಕರ್ಯಗಳ ಜತೆಗೆ ತಾಯಿ-ಮಗು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಲೋಕಾರ್ಪಣೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಮಹಲ್, ಜಾಗರ ಮುಂತಾದ ಗುಡ್ಡಗಾಡು ಪ್ರದೇಶದ ಜನರಿಗೆ ಸಮಾನ ಅವಕಾಶ ಕಲ್ಪಿಸಿ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ ಮಂಜೇಗೌಡ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರವೀಣ್ ಬೆಟಗೆರೆ, ಗ್ರಾಮ ಪಂಚಾಯಿತಿ ಸದಸ್ಯೆ ಶಕುಂತಲಾ, ಡಾ. ರಂಜಿತ, ಡಾ. ಶಶಿಕಲಾ, ಡಾ. ಮಂಜುನಾಥ್, ಸುರೇಶ್, ರಾಮಚಂದ್ರ, ಶಿವಾಜಿ, ಧರ್ಮಣ್ಣ, ಜಗದೀಶ್, ಶಂಕರ್, ಮುನ್ನ, ಅರುಣ, ಪ್ರಭು ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-126-1898440826

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.