ಚಿಕ್ಕಮಗಳೂರು: ಗ್ರಾಮೀಣ ಪ್ರದೇಶದಲ್ಲಿ ಮನೆ ಬಾಗಿಲಿನಲ್ಲೇ ಆರೋಗ್ಯ ಸೇವೆ ಒದಗಿಸುವ ಆಯುಷ್ಮಾನ ಆರೋಗ್ಯ ಕೇಂದ್ರಗಳ ನಿರ್ಮಾಣ ಯೋಜನೆ ಜಿಲ್ಲೆಯಲ್ಲಿ ಹಿನ್ನಡೆ ಅನುಭವಿಸುತ್ತಿದೆ. 10 ಬಾರಿ ಟೆಂಡರ್ ಕರೆದರೂ ಗುತ್ತಿಗೆದಾರರು ಮುಂದೆ ಬಾರದಿರುವುದರಿಂದ ಯೋಜನೆ ಅನುಷ್ಠಾನಕ್ಕೆ ಆರೋಗ್ಯ ಇಲಾಖೆಯು ತಿಣುಕಾಡುತ್ತಿದೆ.

ಗ್ರಾಮೀಣ ಮತ್ತು ನಗರದ ಪ್ರದೇಶದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದ್ದು, ಜಿಲ್ಲೆಗೆ 273 ಆಯುಷ್ಮಾನ್ ಆರೋಗ್ಯ ಕೇಂದ್ರಗಳು ಮಂಜೂರಾಗಿವೆ. ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಸ್ಥಳೀಯವಾಗಿಯೇ ಜನರಿಗೆ ಒದಗಿಸುವುದು ಇದರ ಉದ್ದೇಶ.

273 ಆರೋಗ್ಯ ಕೇಂದ್ರಗಳ ಪೈಕಿ 152 ಕಡೆಗಳಲ್ಲಿ ಸರ್ಕಾರಿ ಕಟ್ಟಡಗಳಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರಗಳನ್ನು ತೆರೆದು ಆರೋಗ್ಯ ಸೇವೆ ನೀಡಲಾಗುತ್ತಿದೆ. ಉಳಿದ 121 ಕಡೆಗಳಲ್ಲಿ ಖಾಸಗಿ ಕಟ್ಟಡಗಳಲ್ಲಿ ಬಾಡಿಗೆ ಆಧಾರದಲ್ಲಿ ನಿರ್ವಹಿಸಲಾಗುತ್ತಿದೆ.

ಈ ಪೈಕಿ ಚಿಕ್ಕಮಗಳೂರು ತಾಲ್ಲೂಕಿನ ಭಕ್ತರಹಳ್ಳಿ, ರಾಮನಹಳ್ಳಿ, ಕುನ್ನಾಳು, ಕಟಾರದಹಳ್ಳಿ, ತರೀಕೆರೆ ತಾಲ್ಲೂಕಿನ ಮಲ್ಲೇನಹಳ್ಳಿ, ಹಾದಿಕೆರೆ, ಬಾವಿಕೆರೆ, ಕುಡ್ಲೂರು, ನರಸಿಂಹರಾಜಪುರ ತಾಲ್ಲೂಕಿನ ಹೊಡೆಯಾಳ, ಬೆಳ್ಳೂರು, ಕೆ. ಕಣಬೂರು, ಕಡೂರು ತಾಲ್ಲೂಕನ ಚಿಕ್ಕಂಗಳ, ಪಿಳ್ಳೇನಹಳ್ಳಿ, ಅಣೆಗೆರೆ, ಮಾಚಗೊಂಡನಹಳ್ಳಿ, ಎಸ್.ಮಾದಾಪುರ, ಬೀರೂರು, ಕೊಪ್ಪ ತಾಲ್ಲೂಕಿನ ಬಾಳಗಡಿ, ಅರೆಹಳ್ಳಿ, ಬಪ್ಪುಂಜಿ, ಲೋಕನಾಥಪುರ, ಮೂಡಿಗೆರೆ ತಾಲ್ಲೂಕಿನ ಹಮ್ಮಿನಕೂಡಿಗೆ, ಗೌಡನಹಳ್ಳಿ, ಬಣಕಲ್ ಸೇರಿ 25 ಕೇಂದ್ರಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ.

ರಾಮನಹಳ್ಳಿ, ಚಿಕ್ಕಂಗಳ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಉಳಿದ ಕಡೆಗಳಲ್ಲಿ ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಜಾಗ ದೊರಕದೆ 23 ಕಡೆ ಅನುಮೋದನೆ ದೊರಕುವುದು ಬಾಕಿ ಇದೆ.

ನಷ್ಟದ ಭಯದಲ್ಲಿ ಗುತ್ತಿಗೆದಾರರು

ಆಯುಷ್ಮಾನ್ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಸರ್ಕಾರ ತಲಾ ₹65 ಲಕ್ಷ ಅನುದಾನ ನಿಗದಿ ಮಾಡಿದೆ.

ಆದರೆ, ಸಿಮೆಂಟ್ ಸೇರಿ ಕಚ್ಚಾ ವಸ್ತುಗಳ ಬೆಲೆ ಏರಿಕೆ ಆಗಿರುವುದರಿಂದ ₹65 ಲಕ್ಷದಲ್ಲಿ ಕಟ್ಟಡ ನಿರ್ಮಾಣ ಕಷ್ಟ ಎಂಬ ಕಾರಣಕ್ಕೆ ಗುತ್ತಿಗೆದಾರರು ಕಾಮಗಾರಿ ನಿರ್ವಹಿಸಲು ಮುಂದೆ ಬರುತ್ತಿಲ್ಲ.

ರಾಜ್ಯ ಮಟ್ಟದಲ್ಲೇ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, 11ನೇ ಬಾರಿಗೆ ಟೆಂಡರ್ ಆಹ್ವಾನಿಸಲಾಗಿದೆ. ಕೆಲವೆಡೆ ಟೆಂಡರ್ ಆಗಿದ್ದರೂ ಕಾಮಗಾರಿಯನ್ನು ಗುತ್ತಿಗೆದಾರರು ಆರಂಭಿಸುತ್ತಿಲ್ಲ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡ್ಡಗಾಡುಗಳ ಗ್ರಾಮಗಳಿಗೆ ಕಚ್ಚಾ ವಸ್ತುಗಳನ್ನು ಸಾಗಿಸಿ ಕಟ್ಟಡ ನಿರ್ಮಿಸುವುದು ಕೂಡ ಆರ್ಥಿಕವಾಗಿ ಕಷ್ಟ. ಈ ಎಲ್ಲಾ ಕಾರಣಗಳಿಂದ ಯೋಜನೆ ಅನುಷ್ಠಾನ ಕಷ್ಟವಾಗುತ್ತಿದೆ. ಜಿಲ್ಲೆಯಲ್ಲಿ ಹಿನ್ನಡೆಯಾಗಿದೆ ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.