ಬಾಳೆಹೊನ್ನೂರು: ರೈತರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವ ಉದ್ದೇಶದಿಂದ ಆಡಳಿತ ಯಂತ್ರವನ್ನು ಗ್ರಾಮ ಮಟ್ಟಕ್ಕೆ ತರಲಾಗಿದೆ. ದುಡಿಯುವ ಕೈಗಳಿಗೆ ಆರ್ಥಿಕ ಶಕ್ತಿ ನೀಡಿದರೆ ದೇಶ ಸಮೃದ್ಧವಾಗುತ್ತದೆ ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.

ಪಟ್ಟಣದಲ್ಲಿ ನೂತನ ನಾಡಕಚೇರಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸೇತುವೆ ನಿರ್ಮಾಣದಿಂದ ಮನೆ ಕಳೆದುಕೊಳ್ಳುವ ಬಂಡಿಮಠದ ಏಳು ನಿವಾಸಿಗಳಿಗೆ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಹಕ್ಕುಪತ್ರ ನೀಡಲಾಗುತ್ತದೆ. ಈ ಹಿಂದೆ ಅತಿವೃಷ್ಟಿಯಿಂದ ಹಾನಿಗೊಳಗಾದ ಹಿನ್ನೆಲೆಯಲ್ಲಿ ಪರಿಹಾರ ಪಡೆದಿದ್ದದವರಿಗೆ ಮತ್ತೆ ಹಕ್ಕುಪತ್ರ ನೀಡಲು ಸಾಧ್ಯವಿಲ್ಲ. ಸೇತುವೆ ಕಾಮಗಾರಿ ಮುಂದುವರಿಯಲಿದ್ದು, ಹಕ್ಕುಪತ್ರ ಪಡೆದವರು ಮನೆ ಖಾಲಿ ಮಾಡಿ ಬಾಡಿಗೆ ಮನೆಗೆ ತೆರಳಬೇಕು. ಹಕ್ಕುಪತ್ರ ನೀಡಿದ ಜಾಗದಲ್ಲಿ ಮನೆ ನಿರ್ಮಾಣವಾಗುವವರೆಗೆ ಬಾಡಿಗೆ ಹಣವನ್ನು ಸರ್ಕಾರ ಪಾವತಿಸಲಿದೆ’ ಎಂದರು.

ನರಸಿಂಹರಾಜಪುರ ತಾಲ್ಲೂಕಿನ 57 ಗ್ರಾಮಗಳ ಪೈಕಿ 35 ಗ್ರಾಮಗಳಲ್ಲಿ ಜಂಟಿ ಸರ್ವೆ ಪೂರ್ಣಗೊಂಡಿದೆ. ಸರ್ವೆ ವೇಳೆ ಗ್ರಾಮವಾರು ನಕ್ಷೆ ಪ್ರದರ್ಶಿಸಲಾಗುವುದು. ಮುಂದಿನ ದಿನಗಳಲ್ಲಿ ಗೋಮಾಳ, ಕಂದಾಯ, ಅರಣ್ಯಭೂಮಿ, ಗ್ರಾಮ ಠಾಣಾ ಕುರಿತು ಸ್ಪಷ್ಟ ಚಿತ್ರಣ ಸಿಗಲಿದೆ. ಜಂಟಿ ಸರ್ವೆ ಪೂರ್ಣಗೊಂಡ ನಂತರ ಶೇ 80ರಷ್ಟು ಹಕ್ಕುಪತ್ರ ನೀಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಇ.ಸಿ. ಜೋಯ್ ಮಾತನಾಡಿ, ಹಲವು ವರ್ಷಗಳ ಬೇಡಿಕೆಯನ್ನು ಶಾಸಕರು ಈಡೇರಿಸಿದ್ದಾರೆ. 2019ರಲ್ಲಿ ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಹಕ್ಕುಪತ್ರ ನೀಡಲಾಗುತ್ತಿದೆ. ಕಾಂಗ್ರೆಸ್ ಅವಧಿಯಲ್ಲಿ ಕ್ಷೇತ್ರ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿ ಕಂಡಿದೆ. ಎಲ್ಲಾ ವರ್ಗದ ಜನರ ಬೇಡಿಕೆಗಳಿಗೂ ಮನ್ನಣೆ ನೀಡಿದ್ದು, ಅತಿ ಹೆಚ್ಚು ಅನುದಾನ ದೊರೆತಿದೆ ಎಂದರು.

ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೇರ್ ಬೈಲ್ ನಟರಾಜ್, ಗ್ಯಾರಂಟಿ ಸಮಿತಿ ಅಧ್ಯಕ್ಷೆ ಚಂದ್ರಮ್ಮ, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹನೀಫ್, ತಹಶೀಲ್ದಾರ್ ನೂರುಲ್ ಹುದಾ, ಸಮೀಕ್ಷಾ,ಶೇಖ್ ಅಬ್ದುಲ್ಲಾ, ನಿಷ್ಮಾ ಜೈನ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-126-1791377023

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.