ತರೀಕೆರೆ: ತಾಲ್ಲೂಕಿನ ಬಾವಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು ₹6 ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.

ತಾಲ್ಲೂಕಿನ ಲಕ್ಕವಳ್ಳಿ ಹೋಬಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಲಕ್ಕವಳ್ಳಿ ಹೋಬಳಿ ಅಭಿವೃದ್ಧಿಗಾಗಿ ವಿವಿಧ ಕಾಮಗಾರಿಗಳನ್ನು ಪಕ್ಷದ ನಾಯಕರಾದ ಬೂಸೇನಹಳ್ಳಿಯ ಬಿ.ಎನ್. ಚಂದ್ರಪ್ಪನವರ ಗಮನಕ್ಕೆ ತರುತ್ತಿದ್ದು, ಅವರು ಮುತುವರ್ಜಿ ವಹಿಸಿ, ಕಾಮಗಾರಿಗಳನ್ನು ಮಂಜೂರು ಮಾಡಿಸುತ್ತಿರುವುದರಿಂದ ಲಕ್ಕವಳ್ಳಿ ಹೋಬಳಿಯಲ್ಲಿ ಹತ್ತಾರು ಕೋಟಿ ರೂಪಾಯಿಗಳ ಕಾಮಗಾರಿ ನಡೆಯುತ್ತಿವೆ ಎಂದರು.

ಬಾವಿಕೆರೆ ಗ್ರಾಮದಲ್ಲಿ ₹65 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರದಿಂದ ಈ ಭಾಗದ ಜನರಿಗೆ ಸುಲಭವಾಗಿ ಆರೋಗ್ಯ ಸೇವೆ ದೊರಕಲಿದೆ. ಲಕ್ಕವಳ್ಳಿ ಕೆರೆಯನ್ನು ₹1 ಕೋಟಿ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಬಾವಿಕೆರೆ ಗ್ರಾಮದ ಚತುಷ್ಪಥ ರಸ್ತೆ ಅಭಿವೃದ್ಧಿಗೆ ಅನುಮೋದನೆ ದೊರೆತಿದ್ದು, ಕಾಮಗಾರಿ ಶೀಘ್ರ ಆರಂಭಿಸಲಾಗುವುದು. ಲಕ್ಕವಳ್ಳಿ ಗ್ರಾಮದ ಮುಖ್ಯ ರಸ್ತೆ ವಿಸ್ತರಣೆ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಕಂದಾಯ ಮತ್ತು ಅರಣ್ಯ ಇಲಾಖೆಗಳ ಮಧ್ಯೆ ಎದುರಾಗಿರುವ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆ ಸಚಿವರ ಸಹಕಾರದಿಂದ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ತಾ.ಪಂ. ಕೆಡಿಪಿ ಸದಸ್ಯ ಎಚ್.ಎನ್. ಮಂಜುನಾಥ್ ಲಾಡ್, ಬಾವಿಕೆರೆ ಗ್ರಾ.ಪಂ. ಮಾಜಿ ಅಧ್ಯಕ್ಷ ವೆಂಕಟೇಶ್, ಮುಡುಗೋಡು ಗ್ರಾ.ಪಂ. ಮಾಜಿ ಸದಸ್ಯ ಶಿವಕುಮಾರ್, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ಮಣಿಕಂಠ ಪಾಲಯ್ಯ, ಲಕ್ಕವಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ಅಬ್ದುಲ್ ರೆಹಮಾನ್, ಕಾಡಾ ಸದಸ್ಯರಾದ ರಾಜಶೇಖರ್, ಶಿವಕುಮಾರ್, ಸಿಡಿಪಿಒ ಚರಣ್ರಾಜ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಯತಿರಾಜ್, ಡಾ. ಚಂದ್ರಶೇಖರ್, ಮುಖಂಡರಾದ ರಾಜೇಶ್, ಮಹಾಬಲ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-126-1123302212

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.