ನರಸಿಂಹರಾಜಪುರ: ಬೆಲಗೂರಿನಿಂದ ಶೃಂಗೇರಿಗೆ ನೂತನ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿರುವುದು ಶಕ್ತಿ ಯೋಜನೆ ಫಲಾನುಭವಿಗಳ ಜತೆಗೆ ಇತರ ಪ್ರಯಾಣಿಕರಿಗೂ ಅನುಕೂಲಕರವಾಗಿದೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನಸಮಿತಿ ಸದಸ್ಯ ಇಂದಿರಾನಗರ ರಘು ಹೇಳಿದರು.

ಬೆಲಗೂರು–ಶೃಂಗೇರಿ ಮಾರ್ಗಕ್ಕೆ ಮಂಗಳವಾರ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾದ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಬಸ್ಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಹೊಸದುರ್ಗ ಕ್ಷೇತ್ರದ ಶಾಸಕ ಗೋವಿಂದಪ್ಪ ಅವರು ಈ ಬಸ್ ಸಂಚಾರಕ್ಕಾಗಿ ಶ್ರಮವಹಿಸಿದ್ದಾರೆ. ಇದರಿಂದ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಮಾರ್ಗವು ಜನೋಪಯೋಗಿಯಾಗಿದ್ದು, ಪ್ರತಿಯೊಬ್ಬರೂ ಈ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರ ಬೇಡಿಕೆಗಳಿಗೆ ಇಲಾಖೆಯ ಅಧಿಕಾರಿಗಳು ಸ್ಪಂದಿಸುತ್ತಿದ್ದು, ಕ್ಷೇತ್ರದಾದ್ಯಂತ ಸರ್ಕಾರಿ ಬಸ್ಗಳ ಸಂಚಾರ ಹೆಚ್ಚುತ್ತಿರುವುದು ಪ್ರಯಾಣಿಕರಲ್ಲಿ ಸಂತಸ ಮೂಡಿಸಿದೆ. ಆಂಜನೇಯಸ್ವಾಮಿ ಧಾರ್ಮಿಕ ಕ್ಷೇತ್ರವಾದ ಬೆಲಗೂರಿನಿಂದ ಶೃಂಗೇರಿ ಶ್ರೀಶಾರದಾ ಪೀಠಕ್ಕೆ ಸಂಪರ್ಕ ಕಲ್ಪಿಸುವ ಈ ಮಾರ್ಗ ಜನರಿಗೆ ಉಪಯುಕ್ತವಾಗಿದೆ ಎಂದು ಅವರು ತಿಳಿಸಿದರು.

ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಜುಬೇದಾ ಮಾತನಾಡಿ, ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದೆ. ಈ ಬಸ್ ಸಂಚಾರದಿಂದ ಮಹಿಳಾ ಯಾತ್ರಿಕರು ಧಾರ್ಮಿಕ ಕ್ಷೇತ್ರಗಳಿಗೆ ತೆರಳಲು, ವಿದ್ಯಾರ್ಥಿಗಳು ಹಾಗೂ ವಿವಿಧ ಕೆಲಸಗಳಿಗೆ ತೆರಳುವ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಬೇಸಿಲ್, ನಾಗರಾಜ್, ಹೂವಮ್ಮ, ನಿತ್ಯಾನಂದ ಹಾಗೂ ಕಾಂಗ್ರೆಸ್ ಮುಖಂಡರಾದ ಈಚಿಕೆರೆ ಸುಂದರೇಶ್, ಸಮೀರಾ ನಹೀಂ, ಬಿ.ವಿ. ಉಪೇಂದ್ರ, ಸುನಿಲ್ ಕುಮಾರ್, ನಾಗೇಶ್ ಪೂಜಾರಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಡಿ.ಇ. ನೂತನ್, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಮಂಜುಳ, ಶ್ರೀದೇವಿ, ಆಟೊ ಚಾಲಕರು ಇದ್ದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಬಸ್ಗೆ ಪೂಜೆ ಸಲ್ಲಿಸಿ, ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ನೂತನ ಬಸ್ನ ಚಾಲಕ ಮತ್ತು ನಿರ್ವಾಹಕರಿಗೆ ಶಾಲು ಹೊದಿಸಿ, ಹಾರ ಹಾಕಿ ಅಭಿನಂದಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-126-932561915

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.