ಚಿಕ್ಕಮಗಳೂರು: ಭದ್ರಾ ಹಿನ್ನೀರಿನಲ್ಲಿ ರಸ್ತೆ ಮುಳುಗಿದ್ದ ಕಾರಣ, ಪರ್ಯಾಯವಾಗಿ ಸೇತುವೆ ನಿರ್ಮಿಸಬೇಕು ದಶಕಗಳ ಬೇಡಿಕೆ ಈಡೇರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೊಸ ಸೇತುವೆ ಲೋಕಾರ್ಪಣೆ ಮಾಡಲಿದ್ದಾರೆ.

ಭದ್ರಾ ಅಣೆಕಟ್ಟೆ ನಿರ್ಮಾಣಕ್ಕೂ ಮೊದಲು ತಾಲ್ಲೂಕು ಕೇಂದ್ರದಿಂದ ಹೊನ್ನೆಕೂಡಿಗೆ, ಹಂದೂರು, ಚಿನ್ನಕೂಡಿಗೆ, ಚಿಕ್ಕಂದೂರು ಮಾರ್ಗವಾಗಿ ನಾಗೇಸಾಲೂರು, ಬಿಳಾಲ್ ಕೊಪ್ಪ, ಕಲ್ಮನೆಯ ಮೂಲಕ ಭದ್ರಾನದಿಗೆ ಮತ್ತು ಹೆಬ್ಬೆ ಗ್ರಾಮದಲ್ಲಿದ್ದ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿತ್ತು.

ಅಣೆಕಟ್ಟೆ ನಿರ್ಮಾಣದ ಬಳಿಕ ಹಿನ್ನೀರು ಆವರಿಸಿ ಈ ಸಂಪರ್ಕ ಕಡಿದು ಹೋಯಿತು. ಇಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರು ಹಲವು ಬಾರಿ ಮನವಿ ಸಲ್ಲಿಸಿದ್ದರು. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು 2016ರ ಜೂನ್ 3ರಂದು ಪಟ್ಟಣಕ್ಕೆ ಬಂದಿದ್ದ ಸಂದರ್ಭದಲ್ಲಿ ಸೇತುವೆ ನಿರ್ಮಾಣಕ್ಕೆ ಅಂದಿನ ವಿಧಾನ ಪರಿಷತ್ ಸದಸ್ಯರಾಗಿದ್ದ ಎಂ. ಶ್ರೀನಿವಾಸ್ ಮನವಿ ಮಾಡಿದ್ದರು.

ಸೇತುವೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸಿದ್ದರಾಮಯ್ಯ ಆದೇಶ ನೀಡಿದ್ದರು. ತಾಂತ್ರಿಕ ಸಮಿತಿ ಸ್ಥಳಕ್ಕೆ ಭೇಟಿ ನೀಡಿ ಕ್ರಿಯಾಯೋಜನೆ ರೂಪಿಸಿ ₹20 ಕೋಟಿ ಬೇಕಾಗಲಿದೆ ಎಂದು ವರದಿ ನೀಡಿತ್ತು. ಅನುದಾನ ಒದಗಿಸಿದ್ದ ಸಿದ್ದರಾಮಯ್ಯ, 2017ರ ನ. 30ರಂದು ಶಂಕುಸ್ಥಾಪನೆ ನೆರವೇರಿಸಿದ್ದರು. ಪುನಃ ತಾಂತ್ರಿಕ ಸಮಿತಿಯ ಸಲಹೆ ಮೇರೆಗೆ ₹34.85 ಕೋಟಿ ಅನುದಾನ ಬಿಡುಗಡೆಯಾಯಿತು. 2018ರಲ್ಲಿ ಆರಂಭವಾಗಿದ್ದ ಕಾಮಗಾರಿ 2021ರಲ್ಲಿ ಪೂರ್ಣಗೊಳ್ಳಬೇಕಿತ್ತು. ಸರ್ಕಾರದ ಬದಲಾವಣೆ, ಕೋವಿಡ್ ಮತ್ತಿತರ ಕಾರಣಗಳಿಂದ ಕಾಮಗಾರಿ ಕುಂಟುತ್ತ ಸಾಗಿತ್ತು. ಕಾಮಗಾರಿ ಮೊತ್ತ ಮತ್ತಷ್ಟು ಹೆಚ್ಚಾಗಿ ಒಟ್ಟು ₹38.50 ಕೋಟಿಯಲ್ಲಿ 504 ಮೀಟರ್ ಉದ್ದದ ಸೇತುವೆ ನಿರ್ಮಾಣಗೊಂಡಿದೆ.

ಹೊನ್ನೆಕೂಡಿಗೆ ಗ್ರಾಮದಿಂದ ಸುತ್ತಿ ಬಳಸಿ ಎನ್.ಆರ್.ಪುರ ತಲುಪಲು 20 ಕಿ.ಮೀ. ದೂರವಾಗುತ್ತಿತ್ತು. ಹೊಸ ಸೇತುವೆ ನಿರ್ಮಾಣದಿಂದ ಕ್ರಮಿಸುವ ಅಂತರ 5 ಕಿ.ಮೀ.ಗೆ ತಗ್ಗಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-51-1567852980

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.