ಕಡೂರು (ಚಿಕ್ಕಮಗಳೂರು): ಬೀರೂರು ಠಾಣೆಯ ಸಬ್ ಇನ್ಸ್ಪೆಕ್ಟರ್ ಡಿ.ವಿ.ತಿಪ್ಪೇಶ್ ಅವರ ಪತ್ನಿ ಪದ್ಮಾವತಮ್ಮ ಎಸ್.ಜಿ.(36) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಟ್ಟಣದ ರಾಜಾಜಿನಗರದ ಮನೆಯಲ್ಲಿ ಫ್ಯಾನ್ಗೆ ಸೀರೆಯಿಂದ ಪದ್ಮಾವತಮ್ಮ ನೇಣು ಹಾಕಿಕೊಂಡಿದ್ದಾರೆ. ದಂಪತಿ 15 ವರ್ಷಗಳ ಹಿಂದೆ ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದರು.

'ದಂಪತಿಗೆ ಇಬ್ಬರು ಮಕ್ಕಳಿದ್ದು, ಕುಟುಂಬಕ್ಕೆ ಪತಿ ಸಮಯ ಕೊಡುತ್ತಿಲ್ಲ ಎಂಬ ಬೇಸರದಿಂದ ಮಾನಸಿಕವಾಗಿ ನೊಂದಿದ್ದರು ಎಂದು ಹೇಳಲಾಗಿದೆ. ಮಂಗಳವಾರ ರಾತ್ರಿ ಕರ್ತವ್ಯದ ಮೇಲೆ ತಿಪ್ಪೇಶ್ ತೆರಳಿದ್ದಾಗ ಮಧ್ಯರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ಬೆಳಿಗ್ಗೆ ವಿಷಯ ತಿಳಿದಿದ್ದು, ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್ ಭೇಟಿ ನೀಡಿ ಮಾಹಿತಿ ಪಡೆದರು’ ಎಂದು ಪೊಲೀಸರು ತಿಳಿಸಿದ್ದಾರೆ.

ತರೀಕೆರೆ ಡಿವೈಎಸ್ಪಿ ಪರಶುರಾಮಪ್ಪ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಮೃತರ ತಾಯಿ ದೂರು ನೀಡಿದ್ದು, ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-51-853271081

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.