ಚಿಕ್ಕಮಗಳೂರು: ರಾಂಪುರ ರಸ್ತೆ ವೀಕ್ಷಣೆ ವೇಳೆ ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಜಟಾಪಟಿ ನಂತರ ನಗರ ಠಾಣೆಗೆ ದೂರು–ಪ್ರತಿದೂರುಗಳು ಸಲ್ಲಿಕೆಯಾಗುತ್ತಿವೆ. ಮುಸ್ಲಿಂ ಮುಖಂಡರು ನೀಡಿದ್ದ ದೂರು ಆಧರಿಸಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯಾನ್ ವಿರುದ್ಧ ಎಫ್ಐಆರ್ ಶನಿವಾರ ದಾಖಲಾಗಿದ್ದರೆ, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಬಿಜೆಪಿ ಮುಖಂಡರು ಜಾತಿ ನಿಂದನೆ ದೂರು ನೀಡಿದ್ದಾರೆ.

ಮುಸ್ಲಿಂ ಮುಖಂಡ ಮುದಾಸಿರ್ ಪಾಷಾ ಶುಕ್ರವಾರ ನೀಡಿದ್ದ ದೂರು ಆಧರಿಸಿ ಕೋಟ್ಯಾನ್ ವಿರುದ್ಧ ಧರ್ಮ ನಿಂದನೆ ಆರೋಪದಲ್ಲಿ ಎಫ್ಐಆರ್ ದಾಖಲಾಗಿದೆ. ಈ ನಡುವೆ ಶನಿವಾರ ಬಿಜೆಪಿ ಎಸ್ಸಿ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಪಿ. ವೆಂಕಟೇಶ್ ಅವರು ಜಾತಿ ನಿಂದನೆ ದೂರು ನೀಡಿದ್ದಾರೆ.

‘ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ರಾಂಪುರ ರಸ್ತೆ ವೀಕ್ಷಣೆಗೆ ತೆರಳಿದ್ದಾಗ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಗಟ್ಟಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಹೋದೆ. ಆ ಸಂದರ್ಭದಲ್ಲಿ ನನ್ನನ್ನು ತಡೆದ ನಗರಸಭೆ ಸದಸ್ಯರಾದ ಪರಮೇಶರಾಜ್ ಅರಸ್, ಮುನಿರ್, ಕಲಂದರ್, ಜಾವಿದ್ ಮತ್ತು ಕಾಂಗ್ರೆಸ್ ಕಾರ್ಯಕರ್ತರಾದ ಅತಿಕ್, ಫಾರುಕ್, ಆದಿಲ್ ಜಾತಿ ನಿಂದನೆ ಮಾಡಿದರು. ಕೊರಳಪಟ್ಟಿ ಹಿಡಿದು ಎಳೆದಾಡಿ ಹಲ್ಲೆ ಮಾಡಿದರು’ ಎಂದು ವೆಂಕಟೇಶ್ ದೂರು ನೀಡಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ನಿಂದ ಪ್ರತಿದೂರು ಸಲ್ಲಿಕೆಯಾಗಿದೆ. ಕುರುವಂಗಿ ರಾಜೇಶ್ ಅವರು ಬಿಜೆಪಿ ಕಾರ್ಯಕರ್ತರು ಜಾತಿ ನಿಂದನೆ ಮಾಡಿದ್ದಾರೆ ಎಂದು ಶನಿವಾರ ದೂರು ಸಲ್ಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-126-731637181

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.