ಚಿಕ್ಕಮಗಳೂರು: ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾ ಅಭಿಯಾನ ಮಾರ್ಚ್ 28 ಮತ್ತು 29ರಂದು ನಗರದ ಸಂಜೀವಿನ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್ ತಿಳಿಸಿದರು.

ಮಾರ್ಚ್ 28ರಂದು ಬೆಳಿಗ್ಗೆ 11ಕ್ಕೆ ವಿಧಾನಪರಿಷತ್ ಸದಸ್ಯ ಧನಂಜಯ ಸರ್ಜಿ ಅವರು ಉದ್ಘಾಟಿಸಲಿದ್ದು, ಸರ್ಕಾರದ ಸಾಧನೆಗಳು ಕುರಿತು ಮಾತನಾಡಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಧ್ಯಾಹ್ನ 12ಕ್ಕೆ ಪ್ರಶಿಕ್ಷಣ ಅಭಿಯಾನದ ರಾಜ್ಯ ಸಂಚಾಲಕ ವಿಕಾಸ್ ಪುತ್ತೂರು ಮಾತನಾಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಬಿಜೆಪಿ ಇತಿಹಾಸ ಮತ್ತು ವಿಕಾಸ ಕುರಿತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಲಿದ್ದಾರೆ. ಸಂಜೆ 4ಕ್ಕೆ ಸಾಮಾಜಿಕ ಜಾಲತಾಣ ಕುರಿತು ಬಿಜೆಪಿ ರಾಜ್ಯ ಸಾಮಾಜಿಕ ಜಾಲತಾಣ ಸಂಚಾಲಕ ಶಂಕರ್ ಮಾತನಾಡಲಿದ್ದಾರೆ ಎಂದರು.

ಕಾರ್ಯ ವಿಸ್ತರಣೆ ಮತ್ತು ದೃಷ್ಟಿಕೋನ ಕುರಿತು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಸೈದ್ಧಾಂತಿಕ ಅಡಿಪಾಯ ಕುರಿತು ರಾತ್ರಿ 8ಕ್ಕೆ ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಮಾರ್ಚ್ 29ರಂದು ಬೆಳಿಗ್ಗೆ 8ಕ್ಕೆ ಮತಗಟ್ಟೆ ನಿರ್ವಹಣೆ ಕುರಿತು ಪ್ರಕೋಷಗಳ ಸಂಚಾಲಕ ಸಿ.ಆರ್. ಪ್ರೇಮಕುಮಾರ್ ಮಾತನಾಡಲಿದ್ದಾರೆ. ನಂತರ ಸಮಾರೋಪ ಸಮಾರಂಭ ನಡೆಯಲಿದೆ. ಪ್ರಶಿಕ್ಷಣ ಮಹಾ ಅಭಿಯಾನ ಮೂರು ವರ್ಷಗಳಿಗೆ ಒಮ್ಮೆ ಜರುಗಲಿದ್ದು, ಈ ಶಿಬಿರದಲ್ಲಿ ಮತಗಟ್ಟೆ ಅಧ್ಯಕ್ಷರು, ಬಿಎಲ್ಎ, ನಗರ ಮಂಡಲ ಮತ್ತು ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಮಂಡಲ ಮುಖಂಡರಾದ ಉಮೇಶ್, ಜಯರಾಮ್, ರಾಜೀವ್, ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಬಸವರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-126-348094337

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.